ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ - ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಅರೆಸ್ಟ್

03-08-20 07:58 am       Bangalore Correspondent   ಕರ್ನಾಟಕ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹದ ಹಿನ್ನಲೆಯಲ್ಲಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರನ್ನು ಬಂಧಿಸಲಾಗಿದೆ.

ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ಟ್ವಿಟ್ಟರ್​ನಲ್ಲಿ ಆರ್.ಜೆ. ನವೀದ್ ಎಂಬುವರು ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದಿರುವ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ ಅವರು ಅಮಿತ್ ಷಾ ಬಗ್ಗೆ ಆಕ್ಷೇಪಾರ್ಹವಾಗಿ ಕಮೆಂಟ್ ಹಾಕಿದ್ದರು. ಸದ್ಯ ಟ್ವಿಟರ್ ಬರಹ ಡಿಲೀಟ್ ಮಾಡಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505 (1)(ಬಿ)(ನಕಲಿ ಸಂದೇಶ ರವಾನೆ), 505(1) (ಅ), 153(ಕೋಮು ಸಂಘರ್ಷಕ್ಕೆ ಪ್ರೇರೇಪಣೆ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.