ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ  ಜೂ. 14ರ ತನಕ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

12-06-22 08:14 pm       Bengalore Correspondent   ಕರ್ನಾಟಕ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಪ್ರಭಾವದಿಂದ ಇನ್ನೂ ತುಂತುರು ಮಳೆಯಾಗುತ್ತಿದೆ.

ಬೆಂಗಳೂರು, ಜೂ 12: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಪ್ರಭಾವದಿಂದ ಇನ್ನೂ ತುಂತುರು ಮಳೆಯಾಗುತ್ತಿದೆ.

ಜೂನ್ ಮೊದಲ ವಾರದಲ್ಲಿಯೇ ನೈಋತ್ಯ ಮುಂಗಾರು ಕರ್ನಾಟಕಕ್ಕೆ ಆಗಮಿಸಿದೆ. ಆದರೆ 10 ದಿನಗಳಿಂದ ಮುಂಗಾರು ದುರ್ಗಲವಾಗಿದ್ದು, ಮಳೆಯಾಗುತ್ತಿಲ್ಲ. ಮುಂಗಾರು ಪೂರ್ವ ಮಳೆಯ ಪರಿಣಾಮ ಕೃಷಿ ಚಟುವಟಿಕೆಗಳು ಆರಂಭವಾಗಿವೆ.

karnataka: Karnataka: Monsoon ends with 8% deficit rainfall | Bengaluru  News - Times of India

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇರಿದಂತೆ ಮಳೆಯಾಗಲಿದೆ ಎಂದು ಹೇಳಿದೆ.

Karnataka Rain: ಕರ್ನಾಟಕ; ಮಾರ್ಚ್‌ 28ರಂದು ಗುಡುಗು ಸಹಿತ ಮಳೆ | Karnataka : Rain  To Continue In Malnad And Karavali Regions - Kannada Oneindia

ಕಾರವಾರ, ತೀರ್ಥಹಳ್ಳಿ, ಸಾಗರ, ಕೊಪ್ಪ, ಭಟ್ಕಳ, ಅಂಕೋಲಾ, ಹೊನ್ನಾವರ, ಕುಮಟಾ, ಶಿರಸಿ ಮುಂತಾದ ಕಡೆ ಶನಿವಾರದಿಂದ ಮಳೆ ಚುರುಕಾಗಿದೆ. ಜೂನ್ 14ರ ತನಕವೂ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Rains in Karavali Malnad to continue till June 14 reports weather forecast.