ಕರ್ನಾಟಕ ಲೋಕಾಯುಕ್ತರಾಗಿ ಭೀಮನಗೌಡ ಪಾಟೀಲ್ ನೇಮಕ

14-06-22 07:53 pm       Bengalore Correspondent   ಕರ್ನಾಟಕ

ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕಗೊಂಡಿದ್ದಾರೆ. ಉಪ ಲೋಕಾಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರನ್ನು ಲೋಕಾಯಕ್ತರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು, ಜೂ 14: ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕಗೊಂಡಿದ್ದಾರೆ. ಉಪ ಲೋಕಾಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರನ್ನು ಲೋಕಾಯಕ್ತರಾಗಿ ನೇಮಕ ಮಾಡಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಕೆ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ.

CM Bommai arrives in Delhi today amid talk of change in Karnataka |  Political Pulse News,The Indian Express

ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಜನವರಿ 27, 2022ರಂದು ನಿವೃತ್ತರಾಗಿದ್ದರು. ಬಳಿಕ ಕರ್ನಾಟಕ ಲೋಕಾಯುಕ್ತ ಹುದ್ದೆ ಖಾಲಿಯಾಗಿತ್ತು.

ಪಿ. ವಿಶ್ವನಾಥ ಶೆಟ್ಟಿ ನಿವೃತ್ತರಾದ ಬಳಿಕ ನೂತನ ಲೋಕಾಯುಕ್ತರ ನೇಮಕಕ್ಕೆ ಸರ್ಕಾರ ವಿಳಂಬ ಮಾಡಿತ್ತು. ಈ ಕುರಿತು ಚರ್ಚೆಗಳು ಆರಂಭವಾಗಿದ್ದವು. ಮಂಗಳವಾರ ಅಂತಿಮವಾಗಿ ಹೊಸ ಲೋಕಾಯುಕ್ತರ ನೇಮಕ ಮಾಡಲಾಗಿದೆ.

Highlights: Karnataka Lokayukta Justice Vishwanath Shetty Stabbed, Tej Raj  Sharma Arrested

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಮತ್ತು ಪ್ರತಿಪಕ್ಷ ನಾಯಕರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕದ ಕುರಿತು ಶಿಫಾರಸು ಮಾಡಿದ್ದರು.

ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ 1/6/1956ರಂದು ಜನಿಸಿದರು. 5/9/1980ರಂದು ವಕೀಲರಾಗಿ ನೋಂದಣಿಯಾದರು. ಜಿಲ್ಲಾ ಮತ್ತು ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್‌ ಮಾಡಿದರು. 21/10/2004ರಲ್ಲಿ ಕರ್ನಾಟಕ ಹೈಕೋರ್ಟ್ ಖಾಯಂ ನ್ಯಾಯಮೂರ್ತಿಯಾಗಿ ನೇಮಕವಾದರು.

After a long delay, the Karnataka government has appointed Justice Bhimanagouda Sanganagouda Patil as the next Lokayukta of the state. Justice Patil is currently serving as Upalokayukta. The Lokayukta post has been vacant since the retirement of Justice Vishwanath Shetty in January this year. Justice Patil is a former judge in Karnataka High Court. He will take oath as Lokayukta on June 15.