ಬ್ರೇಕಿಂಗ್ ನ್ಯೂಸ್
15-06-22 03:47 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ಯುವ ವೈದ್ಯರೊಬ್ಬರು ಅಪಾರ್ಟ್ಮೆಂಟ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದ್ದು ವೈದ್ಯನ ಆತ್ಮಹತ್ಯೆ ವಿಚಾರ ತಿಳಿಯುತ್ತಲೇ ಜನ ಸೇರಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಪೃಥ್ವಿರಾಜ್ ರೆಡ್ಡಿ ಆತ್ಮಹತ್ಯೆ(31) ಮಾಡಿಕೊಂಡ ವೈದ್ಯ.
ಮೂರು ತಿಂಗಳ ಹಿಂದೆಯಷ್ಟೇ ಪೃಥ್ವಿರಾಜ್, ವೈದ್ಯೆಯಾಗಿರುವ ಯುವತಿಯನ್ನೇ ನೋಡಿ ಮದುವೆಯಾಗಿದ್ದರು. ಈಗ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಲು ಸ್ಪಷ್ಟ ಕಾರಣ ಏನೆಂದು ತಿಳಿದುಬಂದಿಲ್ಲ. ಆದರೆ ಪೃಥ್ವಿರಾಜ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು ಮದುವೆಯ ಬಳಿಕ ಸಮಸ್ಯೆ ಗೊತ್ತಾಗಿದ್ದರಿಂದ ಪತ್ನಿಗೆ ತಿಳಿಸಲಾಗದೆ ಖಿನ್ನರಾಗಿದ್ದರು. ತನ್ನ ಹೃದಯ ಸಮಸ್ಯೆಯನ್ನು ಹೆಂಡತಿ ಬಳಿ ಹೇಳಿಕೊಳ್ಳದೇ ಒಂದು ವಾರದಿಂದ ಖಿನ್ನರಾಗಿದ್ದ ಪೃಥ್ವಿರಾಜ್ ರೆಡ್ಡಿ ಪತ್ನಿಯ ಬಾಳು ಹಾಳು ಮಾಡಿದೆ ಎಂದು ಮನನೊಂದು ಸಾವಿಗೆ ಶರಣಾಗಿದ್ದಾರೆ.
ಪೃಥ್ವಿರಾಜ್ ರೆಡ್ಡಿ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಮೂಲದವರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Victoria hospital doctor commits suicide by jumping from the Apartment building. Prithviraj reddy is the deceased doctor. It is said he married three months ago and was suffering from depression due to heart issues. He took this extreme condition feeling that he spoilt his wife's life without informing her about his illness.
26-02-25 10:43 pm
Bangalore Correspondent
Yellow alert, heatwave threat, Mangalore: ಬಿಸ...
26-02-25 06:14 pm
Minister Ishwara Khandre, Elephant Sanctuary...
25-02-25 10:30 pm
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
26-02-25 10:15 pm
Mangalore Correspondent
Mangaluru-Kabaka Train, Brijesh Chowta: ಮಂಗಳೂ...
26-02-25 03:40 pm
Urwa Police, Mangalore, Selfie, Suspend: ಸೈಬರ...
25-02-25 10:58 pm
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
26-02-25 10:48 pm
HK News Desk
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm