ಅಗ್ನಿಪಥ್ ಯೋಜನೆಯನ್ನು  ತಕ್ಷಣ ರದ್ದುಪಡಿಸಬೇಕು, ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ;  ಸಿದ್ದರಾಮಯ್ಯ ಟ್ವೀಟ್ ವಾರ್ 

17-06-22 03:32 pm       Bengalore Correspondent   ಕರ್ನಾಟಕ

ಅಗ್ನಿಪಥ್ ಯೋಜನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಬೆಂಗಳೂರು, ಜೂ 17: ಅಗ್ನಿಪಥ್ ಯೋಜನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತ ಅಜೆಂಡಾ ಏನಾದರೂ ಇದೆಯೇ?

PM modi Covid meeting: PM Narendra Modi interacts with CMs over Covid  situation - The Economic Times

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಪ್ರಶ್ನಿಸಿದರು. 

Protests against Agnipath intensify, gates at some Delhi metro stations  closed, Section 144 imposed in Gurugram

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ. 

Students protest at Delhi's ITO against Agnipath scheme

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟು ಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

Agnipath scheme protests: Latest updates - School bus carrying children  attacked in Darbhanga

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲವಾಗಿದೆ.

Agnipath Protests Live: Rage In 7 States; Houses Of Bihar Deputy CM, State  BJP Chief Attacked - Indiaahead News

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Leader of Opposition Siddaramaiah asked the NDA government led by Prime Minister Narendra Modi to drop ‘Agnipath’, a new scheme for recruitment of soldiers, as ‘it will push youth into unemployment and will have adverse impact on security of the country’.