ನಾಳೆ ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ 

17-06-22 04:56 pm       Bengalore Correspondent   ಕರ್ನಾಟಕ

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಬೆಂಗಳೂರು, ಜೂ 17: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಜೂನ್ 18ಕ್ಕೆ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್‌ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

BC Nagesh defends including RSS founder's speech in revised Kannada  textbook | Bengaluru - Hindustan Times

ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ..?

  • ಪದವಿಪೂರ್ವ ಅಧಿಕೃತ ವೆಬ್ ಸೈಟ್ www.karresult.nic.in ಹೋಗುವುದು.
  • ಅಥವಾ www.pue.kar.nic.in or www.karresult.nic.inpuc2022 ಎಂಬುದನ್ನು ಕ್ಲಿಕ್ ಮಾಡಿ.
  • ಎಸ್‌ಎಸ್‌ಎಲ್‌ಸಿ ಮಾದರಿಯಲ್ಲೇ ಹೊಮ್ ಪೇಜ್ ತೆರೆದುಕೊಂಡು ರಿಸಲ್ಟ್ ಲಿಂಕ್ ಬ್ಲಿಂಕ್ ಆಗುತ್ತಿರುತ್ತೆ ಅದನ್ನು ಕ್ಲಿಕ್ ಮಾಡಿ.
  • ನೊಂದಣಿ ನಂಬರ್ ಅನ್ನು ಎಂಟ್ರಿ ಮಾಡಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿದರೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

ಪಿಯುಸಿ ಫಲಿತಾಂಶದ ಬಳಿಕ ವಿದ್ಯಾರ್ಥಿಗಳು ಕಾಲೇಜು ಸೇರಲು ಅನುಕಾಲವಾಗಲಿದ್ದು NEP ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿರುವುದರಿಂದ ವಿದ್ಯಾರ್ಥಿಗಳು ವಿಭಿನ್ನ ಕೋರ್ಸ್ ತೆಗದುಕೊಳ್ಳಲು ಅನುಕೂಲಗಳಿವೆ. ದ್ವಿತೀಯ ಪಿಯುಸಿಯಲ್ಲಿ ಎಷ್ಟು ಅಂಕಗಳನ್ನು ಪಡೆಯುವಿರಿ ಎನ್ನುವುದರ ಮೇಲೆ ಕೆಲವು ಕೋರ್ಸ್‌ಗಳನ್ನು ತೆಗೆದುಕೊಳ್ಳಲು ಅನುಕೂಲವಾಗಲಿದೆ.

Karnataka 2nd PUC result 2022 will be declared tomorrow, June 17, state primary and secondary education minister BC Nagesh announced today.