ಬ್ರೇಕಿಂಗ್ ನ್ಯೂಸ್
18-06-22 05:05 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 18: ಬೆಂಗಳೂರು ನಗರದಲ್ಲಿ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಜನವಸತಿ ಬಡಾವಣೆಗಳಿಗೆ ನೀರು ನುಗ್ಗಿದೆ. ಮಳೆಯ ಅನಾಹುತಕ್ಕೆ 24 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆ ಸಾವು ಕಂಡಿದ್ದಾರೆ.
ಕೆ.ಆರ್ ಪುರಂ ಸಮೀಪದ ಗಾಯತ್ರಿ ಬಡಾವಣೆಯಲ್ಲಿ ರಾತ್ರಿ 12 ಗಂಟೆ ವೇಳೆಗೆ ರಾಜಕಾಲುವೆಯಲ್ಲಿ ನೀರು ಉಕ್ಕಿ ಬಂದಿದ್ದು, ಶಿವಮೊಗ್ಗ ಮೂಲದ ಮಿಥುನ್ (24) ತಾನು ವಾಸವಿದ್ದ ಕಟ್ಟಡದ ಬಳಿ ನೀರು ಬಂದು ಕಂಪೌಂಡ್ ಗೋಡೆ ಬಿದ್ದುದನ್ನು ನೋಡಲು ಹೋಗಿದ್ದ. ಅಲ್ಲಿ ನಿಲ್ಲಿಸಿದ್ದ ಬೈಕ್ ತೆರವು ಮಾಡಲು ಪ್ರಯತ್ನಿಸಿದ್ದು, ಈ ವೇಳೆ ಬೈಕ್ ಸಹಿತ ನೀರಿನಲ್ಲಿ ಯುವಕ ಕೊಚ್ಚಿ ಹೋಗಿದ್ದಾನೆ. ಮಿಥುನ್ ಮತ್ತು ಇತರ ನಾಲ್ವರು ಒಂದೇ ರೂಮಿನಲ್ಲಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ ಅಗ್ನಿಶಾಮಕ ದಳ ಮತ್ತು ಎಸ್ ಡಿಆರ್ ಎಫ್ ಸಿಬಂದಿ ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದ್ದಾರೆ. ರಾಜಕಾಲುವೆ ನಡುವಿನ ಕಬ್ಬಿಣದ ಜಾಲರಿಯಲ್ಲಿ ಹುಡುಕಾಟ ನಡೆಸಿದ್ದು ಯುವಕನ ಪತ್ತೆಯಾಗಿಲ್ಲ. ಬೆಂಗಳೂರು ಪೂರ್ವ ಭಾಗದಲ್ಲಿ ರಾತ್ರಿಯಿಂದ ಬೆಳಗ್ಗಿನ ವರೆಗೂ ಮಳೆಯಾಗಿದ್ದು, ರಾಮಮೂರ್ತಿ ನಗರ, ಕೆ.ಆರ್ ಪುರಂ, ಕಲ್ಕೆರೆ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.


ಇದೇ ವೇಳೆ, ರಾತ್ರಿ ಸುರಿದ ಮಳೆಗೆ ಗರುಡಾಚಾರ್ ಪಾಳ್ಯ ಸಮೀಪದ ಕಾವೇರಿ ನಗರದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಮುನಿಯಮ್ಮ (55) ಮೃತ ಮಹಿಳೆ. ಮಳೆಗೆ ಮನೆಯ ಗೋಡೆ ಕುಸಿದಿದ್ದು, ಅದರ ಅವಶೇಷಗಳಡಿ ಸಿಲುಕಿ ಮಹಿಳೆ ಸಾವು ಕಂಡಿದ್ದಾರೆ. ಮಹದೇವರ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಮೊದಲ ಮಳೆಗೇ ಬೆಂಗಳೂರು ನಲುಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಉಂಟಾಗಿದೆ.
Bangalore heavy rains, water enters into houses, two dead. Bengaluru saw monsoon rainfall for the second consecutive day, making this June one of the wettest on record after a brief lull. On Friday night, much of eastern, western, central, and northern Bengaluru got moderate to heavy rain. According to the BBMP control room, there were no rain-related complaints.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm