ಸೋಮವಾರ ಮೋದಿ ಮೈಸೂರಿಗೆ ; ಸಂಚರಿಸುವ ಮಾರ್ಗದಲ್ಲಿ ಬರುವ ಕಾಲೇಜುಗಳಿಗೆ ರಜೆ ಘೋಷಣೆ ! 

18-06-22 10:36 pm       Bengalore Correspondent   ಕರ್ನಾಟಕ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ. 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅಂದು ನಗರದ ಕೆಲವು ಭಾಗಗಳ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು, ಜೂ.18: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ. 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅಂದು ನಗರದ ಕೆಲವು ಭಾಗಗಳ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಸಂಬಂಧ ಶನಿವಾರ ಆದೇಶ ಹೊರಡಿಸಲಾಗಿದೆ.

karnataka school news: Karnataka: Regular classes and exams will continue, says  higher education minister - Times of India

ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

PM Modi in Mysuru on June 20th, colleges declared holiday. Prime Minister Narendra Modi is arriving in Mysuru on June 20 at 4:40 p.m. on a two-day visit. Sharing details of the itinerary, Mysuru MP Pratap Simha said the Prime Minister will proceed directly to the Maharaja College Grounds on arriving at the Mysuru airport. He will address a rally and interact with the beneficiaries of various Central Government programmes.