ಬೆಂಗಳೂರು ಏರ್ ಬೇಸ್ ಗೆ ಬಂದಿಳಿದ ಮೋದಿ ; ಸಿಎಂ ಬೊಮ್ಮಾಯಿ ಸೇರಿ ನಾಯಕರಿಂದ ಸ್ವಾಗತ

20-06-22 01:19 pm       Bengalore Correspondent   ಕರ್ನಾಟಕ

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.

ಬೆಂಗಳೂರು, ಜೂ 20: ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.

ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮತ್ತು ಅದರ ಜೊತೆಗೆ ಮೂರು ಹೆಲಿಕಾಪ್ಟರ್ ಗಳು ಬೆಂಗಳೂರಿಗೆ ಬಂದಿಳಿದಿವೆ. ಅವರನ್ನು ಯಲಹಂಕ ವಾಯುನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಸುಮಾರು ಒಂದೂವರೆ ವರ್ಷದ ನಂತರ ಕರ್ನಾಟಕಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಮೈಸೂರು ಅರಮನೆ ಮುಂಭಾಗ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಮುಖ್ಯ ಕಾರ್ಯಕ್ರಮವಾಗಿದೆ. ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು, ನಾಳೆ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ತಿರುವನಂತಪುರಕ್ಕೆ ತೆರಳಲಿದ್ದಾರೆ.

ಮುಂದಿನ ವರ್ಷ 2023ಕ್ಕೆ ರಾಜ್ಯದಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣೆ ನಡೆಯಲಿರುವುದರಿಂದ ಪ್ರಧಾನಿ ಮೋದಿಯವರ ಈ ಭೇಟಿ ಭಾರೀ ಮಹತ್ವ ಪಡೆದಿದೆ.

ಪ್ರಧಾನಿ ಸಂಚಾರ-ಹಲವು ಮಾರ್ಗಗಳಲ್ಲಿ ನಿರ್ಬಂಧ: ಇಂದು ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೆ ಪ್ರಧಾನಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವುದರಿಂದ ಹಲವು ಭಾಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ, ಪರ್ಯಾಯ ಸಂಚಾರ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

Prime Minister Narendra Modi is on a two-day visit to Karnataka, on June 20 and 21. The hectic visit will see him inaugurating a series of developmental and public utilities projects in Bengaluru, including the much-awaited suburban rail for the city. But the highlight of this trip will be his participation in the International Day of Yoga event in the backdrop of the iconic Mysuru palace on Tuesday.