ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್‌ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್‌ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm