ಪರಿಷ್ಕರಿತ ಪಠ್ಯಪುಸ್ತಕ ಹಿಂಪಡೆದು ಹಳೆಯದನ್ನೆ ಮುಂದುವರಿಸಿ ; ದಾರ್ಶನಿಕರಿಗೆ ಅವಮಾನ ಸಹಿಸಲ್ಲ : ಮುಖ್ಯಮಂತ್ರಿಗೆ ದೇವೇಗೌಡರಿಂದ ಪತ್ರ 

21-06-22 02:29 pm       Bengalore Correspondent   ಕರ್ನಾಟಕ

ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು ಪಠ್ಯವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. 

ಬೆಂಗಳೂರು, ಜೂನ್ 21: ತೀವ್ರ ವಿವಾದಕ್ಕೆ ಕಾರಣವಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು ಪಠ್ಯವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. 

ಮರು ಪರಿಷ್ಕರಣೆಗೆ ನೇಮಿಸಿದ ಅಧ್ಯಕ್ಷರು ನಾಡಗೀತೆಗೆ ಅವಮಾನ ಮಾಡಿದ್ದಾರೆ. ಕುವೆಂಪು ಅವರಿಗೆ ಮಾಡಿದ ಅವಮಾನ ಮಾಡಿದ್ದಾರೆ. ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂಥಹ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ ಎಂದಿದ್ದಾರೆ.

ಪರಿಷ್ಕರಣೆಯಲ್ಲಿ ಅನೇಕ ತಪ್ಪು ಇವೆ. ಕುವೆಂಪು ಭಾವಚಿತ್ರ ಕೈ ಬಿಡಲಾಗಿದೆ. ಬಸವಣ್ಣನವರ ಆಶಯವುಳ್ಳ ಭಾಗವನ್ನು ಕೈ ಬಿಡಲಾಗಿದೆ. ಇಂಥಹ ಅನೇಕ ತಪ್ಪು ಮರು ಪರಿಷ್ಕರಣೆಯಲ್ಲಿ ಇವೆ. ಹಾಗಾಗಿ ಕೂಡಲೇ ಇದನ್ನು ಹಿಂಪಡೆಯಿರಿ. ಹಿಂದಿನ ಪಠ್ಯವನ್ನೇ ಮುಂದುವರೆಸಿರಿ ಎಂದು ದೇವೇಗೌಡ ಅವರು ಪತ್ರದ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.

Karnataka CM Bommai leaves for Davos to participate in World Economic Forum  | Cities News,The Indian Express

ಗೌಡರ ಪತ್ರದಲ್ಲಿ ಏನೆಲ್ಲ ಇವೆ ? 

ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ 2022ರ ಜೂನ್‌ 18 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದ್ದೆ. ನನ್ನ ಮೂಲಕ ತಮಗೆ ಮನವರಿಕೆ ಮಾಡಲು ನೀಡಿದ ಮನವಿ ಪತ್ರವನ್ನು ಇದರೊಂದಿಗೆ ಲಗತ್ತಿಸಿರುತ್ತೇನೆ.

miscellany - Kuvempu's first turn to Kannada | Deccan Herald

ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದು, ನಾಡಿನ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ.

ಇಂಥ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು. ಇನ್ನು ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ. ಸಮಾಜ ವಿಜ್ಞಾನ ಪಠ್ಯಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. 

The 50 great books on education

ಸಿದ್ಧಗಂಗೆ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನೇ ತೆಗೆಯಲಾಗಿದೆ. ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಲಾಗಿದೆ. ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ.

ಪಠ್ಯಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ತವೆಂದು ದೇವೇಗೌಡರು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Karnataka text book controversy, HD Devegowda writes a letter to CM Basavarj bommai to roll back new text books as they were before.