ಗೋವಾ ಬೀಚ್ ನಲ್ಲಿ ನಟ ದಿಗಂತ್ ಕುತ್ತಿಗೆಗೆ ಪೆಟ್ಟು ; ಬೆಂಗಳೂರಿಗೆ ಏರ್​ಲಿಫ್ಟ್

21-06-22 04:01 pm       Bengalore Correspondent   ಕರ್ನಾಟಕ

ಚಂದನವನದ ದೂದ್‌ಪೇಡಾ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರನ್ನು ಏರ್‌ಲಿಫ್ಟ್‌ ಮೂಲಕ ಬೆಂಗಳೂರಿಗೆ ಕರತರಲಾಗುವುದು ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು, ಜೂ 21: ಚಂದನವನದ ದೂದ್‌ಪೇಡಾ ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರನ್ನು ಏರ್‌ಲಿಫ್ಟ್‌ ಮೂಲಕ ಬೆಂಗಳೂರಿಗೆ ಕರತರಲಾಗುವುದು ಎಂದು ಮೂಲಗಳು ತಿಳಿಸಿವೆ. 
 
ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ  ದಿಗಂತ್ ಕುತ್ತಿಗೆಗೆ  ಪೆಟ್ಟು ಬಿದ್ದಿದೆ. 

ಸದ್ಯ ಗೋವಾದಲ್ಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್  ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.

Kannada Actor Diganth gets hurt while performing summer shot in Goa beach, sources say that he will be airlifted to Bangalore hospital for medical treatment. There is a serious impact on his neck.