ಬ್ರೇಕಿಂಗ್ ನ್ಯೂಸ್
25-06-22 03:02 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 25: ದಕ್ಷಿಣ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿರುವ ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಅವರನ್ನು ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಕೋರ್ಟ್‌ಗೆ ಹಾಜರು ಪಡಿಸಿದರು. ಕೋರ್ಟ್ 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.
ಜನರಿಂದ ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಇಡಿಗೂ ದೂರು ನೀಡಿದ್ದರು.
ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ಸಂದರ್ಭದಲ್ಲಿ ಬಹುತೇಕ ವ್ಯವಹಾರಗಳು ನಗದು ರೂಪದಲ್ಲಿ ನಡೆದಿರುವುದು ಪತ್ತೆಯಾಗಿತ್ತು. ಐಟಿ ದಾಳಿ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಅಷ್ಟೇ ಅಲ್ಲದೇ ಹವಾಲ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಅನುಮಾನ ಬಂದಿತ್ತು.
ಸಾಕಷ್ಟು ಜನರಿಗೆ ಮಂತ್ರಿ ಗ್ರೂಪ್‌ನಲ್ಲಿ ಫ್ಲಾಟ್ ಮಾರಾಟ ಮಾಡಿದ್ದರೂ ಹಣಕಾಸು ವ್ಯವಹಾರದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿತ್ತು. ಅ ಹಣದ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳಿಗೆ ಸೂಕ್ತ ದಾಖಲೆ ಕೊಡುವಲ್ಲಿ ಸುಶೀಲ್ ಪಾಂಡುರಂಗ್ ವಿಫಲರಾಗಿದ್ದರು. ಈ ಕಾರಣಕ್ಕೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿತ್ತು.
Sushil Mantri, CEO and Managing Director of Mantri Developers, has been arrested by the Enforcement Directorate. Sources in the ED said that the south India's biggest real estate tycoon was held in a money laundering case. He has been produced before the judge who has remanded him to the ED custody for investigation.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm