ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ ಎಲೆಕ್ಟ್ರಿಕ್ ವಾಹನಗಳಿಗೆ ಡಿಮಾಂಡ್ ; ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ವಾಹನಗಳ ನೋಂದಣಿ ! 

28-06-22 04:42 pm       Bangalore Correspondent   ಕರ್ನಾಟಕ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.

ಬೆಂಗಳೂರು, ಜೂ 28: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಇವಿ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ (KOO) ಮಾಡಿದ್ದಾರೆ.

ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಇವಿ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇವಿ ವಾಹನಗಳ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ.

Make India the Detroit of electric vehicles, suggests Economic Survey

ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ಕೂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Good news for EV buyers in Odisha, govt announces 15 percent subsidy |  Mobility News | Zee News

ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ' ಎಂದು ಹೇಳಿದ್ದಾರೆ.

Karnataka Over 1 lakh electric vehicles  registered in Karnataka says minister Murugesh Nirani. Karnataka was the first state to issue an Electric Vehicle policy that included incentives for manufacturers and also encouraged EV startups.