ಬ್ರೇಕಿಂಗ್ ನ್ಯೂಸ್
02-07-22 11:17 am HK News Desk ಕರ್ನಾಟಕ
ಕೊಪ್ಪಳ, ಜುಲೈ 2: ಸರಕಾರಿ ಶಾಲೆಯ ಶಿಕ್ಷಕನೊಬ್ಬ ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಲ್ಲದೆ, ಶಾಲಾ ಮಕ್ಕಳನ್ನು ಮನೆಗೆ ಕರೆಸಿಕೊಂಡು ವಿಕೃತವಾಗಿ ವರ್ತಿಸಿದ ವೀಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಾಸವಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕ ಅಜರುದ್ಧೀನ್ ಸಾರ್ವಜನಿಕರಿಂದ ಗೂಸಾ ತಿಂದವನು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈತ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು.
ಆಟ– ಪಾಠದ ನೆಪದಲ್ಲಿ ತನ್ನ ಕಾರಟಗಿಯ ಮನೆಗೆ ಮಕ್ಕಳನ್ನು ಕರೆಸಿಕೊಂಡು ಮಕ್ಕಳ ಬಟ್ಟೆ ಬಿಚ್ಚಿಸಿ, ಗುಪ್ತಾಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶಿಕ್ಷಕನ ವಿಕೃತಿಯ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದ್ದು ವೈರಲ್ ಆಗಿವೆ. ಅಲ್ಲದೇ ನೆರೆ ಮನೆಯ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದೂ ಆರೋಪಿಸಲಾಗಿದೆ.
ಇಬ್ಬರು ಮಹಿಳೆಯರ ಜೊತೆಗಿನ ರಾಸಲೀಲೆಯನ್ನು ಸ್ವತಃ ತಾನೇ ತನ್ನ ಮೊಬೈಲ್‍ನಲ್ಲಿ ವೀಡಿಯೋ ಮಾಡಿಕೊಂಡಿದ್ದು, ಎಲ್ಲಾ ವೀಡಿಯೋ ಇದೀಗ ವೈರಲ್ ಆಗಿವೆ. ಈ ವೀಡಿಯೋ ತೋರಿಸಿ ಮಹಿಳೆಯರನ್ನು ಬೆದರಿಸುತ್ತಿದ್ದ ಕಾಮುಕ, ಅದೇ ಮಹಿಳೆಯರನ್ನು ಮುಂದಿಟ್ಟು ಇನ್ನಷ್ಟು ಮಹಿಳೆಯರನ್ನು ಕರೆಸಿಕೊಂಡು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಇಲ್ಲಿಯವರೆಗೂ ಸುಮಾರು 40 ಮಹಿಳೆಯರನ್ನು ಕಾಮುಕ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಸಾರ್ವಜನಿಕರು ಶಿಕ್ಷಕನಿಗೆ ಧರ್ಮದೇಟು ನೀಡಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಶಿಕ್ಷಕ ಅಜರುದ್ಧೀನ್‍ನನ್ನು ಅಮಾನತುಗೊಳಿಸಿ ಸಿಂಧನೂರು ಬಿಇಒ ಶರಣಪ್ಪ ವಟಗಲ್ ಆದೇಶ ಮಾಡಿದ್ದಾರೆ.
School teacher beaten for sexual assault on many girl students in Koppal. Also videos of romance with 40 different women has gone viral.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm