ಬ್ರೇಕಿಂಗ್ ನ್ಯೂಸ್
04-07-22 09:20 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4 : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳ ತಂಡ ಸೋಮವಾರ ಬಂಧಿಸಿದೆ.
ಬಂಧನದ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಯಾವುದೇ ತನಿಖೆ ಇದ್ದರೂ ಕಾನೂನಿನ ಪ್ರಕಾರವೇ ನಡೆಯುತ್ತದೆ. ಅದರ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಐದು ಲಕ್ಷ ರೂ. ಲಂಚ ಕೇಳಿದ್ದ ಆರೋಪದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ನಾಲ್ಕು ದಿನಗಳ ಹಿಂದಷ್ಟೇ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ನಿರ್ದೇಶಕರ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿತ್ತು. ಎಸಿಬಿ ಡಿವೈಎಸ್‌ಪಿ ಕೆ. ರವಿಶಂಕರ್ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರದಲ್ಲಿ ಅಧಿಕಾರಿಯನ್ನು ಬಂಧಿಸಿದೆ.
ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು ಬೇಗೂರು ನಿವಾಸಿ ಅಜಂ ಪಾಷಾ ಎಂಬವರಿಂದ ₹ 5 ಲಕ್ಷ ಲಂಚ ಪಡೆಯುತ್ತಿದ್ದಾಗ ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ಮಹೇಶ್ ಮತ್ತು ನ್ಯಾಯಾಲಯ ವಿಭಾಗದ ಸಹಾಯಕ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಮೇ 21 ರಂದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಹಾಗೂ ಮಹೇಶ್ ಜತೆಗಿನ ಸಂಭಾಷಣೆಯ ವಿವರವನ್ನು ಮೊಬೈಲ್‌ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದ ಆಜಂ ಪಾಷಾ ಎಸಿಬಿ ತನಿಖಾ ಸಂಸ್ಥೆಗೆ ದೂರು ನೀಡಿದ್ದರು.
ಲಂಚದ ಹಣವನ್ನು ಮಹೇಶ್ ಮತ್ತು ಚೇತನ್ ಕುಮಾರ್ ಪಡೆದಿದ್ದರೂ, ದೂರುದಾರರಿಗೆ ಸಂಬಂಧಿಸಿದ ಕಡತ ಜಿಲ್ಲಾಧಿಕಾರಿ ಬಳಿ ಇರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನು ಮೂರನೇ ಆರೋಪಿ ಎಂದು ಹೆಸರಿಸಲಾಗಿದೆ. ಎಸಿಬಿ ಅಧಿಕಾರಿಗಳು ಜೂನ್ 22 ಮತ್ತು 30ರಂದು ಇಡೀ ದಿನ ಅಧಿಕಾರಿಯ ವಿಚಾರಣೆ ನಡೆಸಿದ್ದರು. ಇದೀಗ ಖಚಿತ ಸಾಕ್ಷ್ಯಗಳ ಆಧಾರದಲ್ಲಿ ಅಧಿಕಾರಿಯನ್ನು ಬಂಧಿಸಿದೆ.
The Anti Corruption Bureau (ACB) officials arrested J Manjunath, former Deputy Commissioner of Bengaluru Urban, in a case of bribery. The officials arrested him on Monday on the charges of demanding a bribe from a land owner recently.Manjunath is a promoted IAS officer. Following the allegations against him and the High Court's observation of the ongoing investigation of ACB officials, the state government had transferred Manjunath from DC Urban and posted him as Director of Integrated Child Protection Scheme.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm