ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm