ನಿಗಮ, ಮಂಡಳಿ, ಪ್ರಾಧಿಕಾರಗಳ 52 ಅಧ್ಯಕ್ಷರಿಗೆ ಕೊಕ್ ; ಹರಿಕೃಷ್ಣ ಬಂಟ್ವಾಳ್, ಸಂತೋಷ್ ರೈ ಸೇರಿ ಕರಾವಳಿಯ ಐವರ ನೇಮಕ ರದ್ದು, ಸದ್ಯದಲ್ಲೇ ಹೊಸ ಪಟ್ಟಿ    

12-07-22 05:43 pm       Bangalore Correspondent   ಕರ್ನಾಟಕ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ 52 ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನಾಮ ನಿರ್ದೇಶನವನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು, ಜುಲೈ 12: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ 52 ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ನಾಮ ನಿರ್ದೇಶನವನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸೋಮವಾರ ರಾತ್ರಿ ತುರ್ತಾಗಿ ಸಿಎಂ ಬೊಮ್ಮಾಯಿ ಒಂದಿಬ್ಬರು ಸಚಿವರ ಜೊತೆಗೆ ಚರ್ಚಿಸಿ, ನಿಮಗ ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಪಡಿಸಲು ನಿರ್ಧರಿಸಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ನಿಗಮದ ಅಧ್ಯಕ್ಷರಾಗಿರುವವರನ್ನು ಬದಲಾಯಿಸಲು ನಿರ್ಧರಿಸಿದ್ದು, ಹೊಸ ನೇಮಕಾತಿಗೆ ಪಟ್ಟಿ ರೆಡಿಯಾಗಿದೆ ಎನ್ನುವ ಮಾಹಿತಿಯಿದೆ. ಸದ್ಯಕ್ಕೆ ಒಟ್ಟು 52 ನಿಗಮ, ಮಂಡಳಿ ಮತ್ತು ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದು ಪಡಿಸಲಾಗಿದೆ.

ಕರಾವಳಿಯಲ್ಲಿ ಪ್ರಮುಖವಾಗಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ ಶೆಟ್ಟಿ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅನಂತ ಆಶೀಸರ, ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳ್ಯಾರ್, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿತಿನ್ ಕುಮಾರ್ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರ ಹೆಸರು ರದ್ದುಪಡಿಸಿ ಆದೇಶ ಹೊರಡಿಸಿದ ಪಟ್ಟಿಯಲ್ಲಿ ಕಂಡುಬಂದಿಲ್ಲ.

Appointment of five persons including Santosh Rai for KEONICS forbade