ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm