ಬ್ರೇಕಿಂಗ್ ನ್ಯೂಸ್
19-07-22 10:21 pm HK News Desk ಕರ್ನಾಟಕ
ಮೈಸೂರು, ಜುಲೈ 19 : ನಾನೇನು ಸನ್ಯಾಸಿಯಲ್ಲ. ಖಾದಿ ಬಟ್ಟೆ ಹಾಕ್ಕೊಂಡು ಬಂದಿದ್ದೇನೆ. ಕಾವಿ ತೊಟ್ಟವನಲ್ಲ ನಾನು. ಸಿಎಂ ಆಗೋ ಕನಸು ನನಗೂ ಇದೆ. ಆದರೆ ಜನರು ನಮಗೆ ಅಧಿಕಾರ ಕೊಡಬೇಕು. ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಆಗಬೇಕು ಅಂತ ಪಕ್ಷವೇ ನಿರ್ಧರಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿ.ಕೆ.ಶಿ, ಸಿಎಂ ವಿಚಾರ ಕುರಿತ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಮುಖ್ಯಮಂತ್ರಿ ಆಗುವುದಕ್ಕಿಂತ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಮುಖ್ಯ ಎಂದು ತಿಳಿಸಿದರು.
ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಸಿಗುತ್ತದೆ. ಪಕ್ಷದಲ್ಲಿ ಯಾರು ಮುಖ್ಯಮಂತ್ರಿಯಾಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ. ಎಸ್.ಎಂ. ಕೃಷ್ಣ ನಂತರ ಒಕ್ಕಲಿಗ ಸಮುದಾಯದ ನಾನು ಪಕ್ಷದ ಅಧ್ಯಕ್ಷನಾಗಿದ್ದು, ಒಕ್ಕಲಿಗ ಸಮಾಜ ನನ್ನ ಬೆನ್ನ ಹಿಂದೆ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ತಾವು ಪರೋಕ್ಷವಾಗಿ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದೀರಾ ಎಂಬ ಪ್ರಶ್ನೆಗೆ, ನಾನೇನು ಸನ್ಯಾಸಿನಾ? ನಾನು ಖಾದಿ ಬಟ್ಟೆ ಹಾಕಿಕೊಂಡು ಬಂದಿದ್ದೇನೆ ಹೊರತು, ಕಾವಿ ಬಟ್ಟೆ ಹಾಕಿ ಬಂದಿಲ್ಲ. ಆದರೆ ಅಂತಿಮವಾಗಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಚಾರವನ್ನು ಪಕ್ಷ ತೀರ್ಮಾನ ಮಾಡಲಿದೆ ಎಂದರು.
ಈ ಸಮಯದಲ್ಲಿ ನಿಮ್ಮ ಸಮುದಾಯ ನಿಮ್ಮ ಜತೆ ನಿಲ್ಲುವುದೇ ಎಂಬ ಪ್ರಶ್ನೆಗೆ, ಕೇವಲ ಒಂದು ಸಮುದಾಯವಲ್ಲ, ರಾಜ್ಯದ ಎಲ್ಲ ಸಮುದಾಯಗಳು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ನಾವು ಜಾತ್ಯಾತೀತ ತತ್ವದಲ್ಲಿ ನಡೆದುಕೊಂಡು ಬಂದಿದ್ದು, ಒಂದು ಜಾತಿ ಹಾಗೂ ಧರ್ಮಕ್ಕೆ ನಾಯಕನಲ್ಲ. ಕಾಂಗ್ರೆಸ್ ನಾಯಕನಾಗಿ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದರು.
Even as former Chief Minister Siddaramaiah has no secret of his ambition of donning the mantle again, Karnataka Pradesh Congress Committee President DK Shivakumar declared that he was a claimant for the coveted post and at the same time asserted that Congress party’s victory in the assembly polls was more important than his becoming the Chief Minister.``After former Chief Minister and present BJP leader S M Krishna, I happen to be the State Congress president and have already appealed to the dominant Vokkaliga community to stand behind him in support,’’ he said participating in a meet-the-press programme organised by the Mysuru District Journalists Association on Tuesday.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm