ಸಿಎಂ ಸಂಪರ್ಕ; ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಹೋಂ ಕ್ವಾರಂಟೈನ್

03-08-20 09:40 am       Bangalore Correspondent   ಕರ್ನಾಟಕ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಪ್ರಾಥಮಿಕ ಸಂಪರ್ಕವನ್ನು ಹೊಂದಿದ ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಬೆಂಗಳೂರು (ಆಗಸ್ಟ್.​ 03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಪ್ರಾಥಮಿಕ ಸಂಪರ್ಕವನ್ನು ಹೊಂದಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. 

ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು ಕಳೆದ ಶುಕ್ರವಾರ ಮತ್ತು ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಅದರೆ, ನಿನ್ನೆ ರಾತ್ರಿ ಸಿಎಂಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ರಾತ್ರಿಯೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿಗಳ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಚಿವರು, ಶಾಸಕರು, ಆಧಿಕಾರಿಗಳು ಈಗ ಸ್ವಯಂ ಕ್ವಾರಂಟೈನ್ ಗೆ ಒಳಗಾಗುತ್ತಿದ್ದಾರೆ.

ಇದೀಗ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಹ ತಮ್ಮ ಮನೆಯಲ್ಲಿ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಬೆಂಗಳೂರು ಪೊಲೀಸ್ ಕಮೀಷನರ್ ಆಗಿ ಕಳೆದ ಶನಿವಾರವಷ್ಟೇ ಕಮಲ್ ಪಂತ್ ಅವರು ಆಧಿಕಾರ ಸ್ವೀಕಾರ ಮಾಡಿದ್ದರು. ಆದರೆ, ಸಿಎಂ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಇದ್ದ ಹಿನ್ನಲೆಯಲ್ಲಿ ತಾವೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.