ಬ್ರೇಕಿಂಗ್ ನ್ಯೂಸ್
21-07-22 12:55 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸರು ಮಂಪರು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ. ತನಿಖಾಧಿಕಾರಿಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ನುಣುಚಿಕೊಳ್ಳುತ್ತಿರುವ ಮಾಜಿ ಅಧಿಕಾರಿಯನ್ನು ಮಂಪರು ಪರೀಕ್ಷೆಗೊಳಪಡಿಸಿ ಮಾಹಿತಿ ಕಲೆಹಾಕಲು ನಿರ್ಧರಿಸಿದ್ದಾರೆ.
ಎರಡು ವಾರಗಳಿಂದ ಅಮೃತ್ ಪೌಲ್ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ತನಿಖೆಗೆ ಸಹಕರಿಸದೇ ತುಟಿ ಬಿಚ್ಚದೆ ಕುಳಿತುಕೊಳ್ಳುತ್ತಿರುವ ಪೌಲ್ ಬಳಿಯಿಂದ ಯಾವುದೇ ಮಾಹಿತಿ ಸಂಗ್ರಹಿಸಲು ಆಗುತ್ತಿಲ್ಲ. ಹೀಗಾಗಿ ನೇಮಕಾತಿ ವಿಭಾಗದ ಮುಖ್ಯಸ್ಥರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಆದರೆ ಅಧಿಕಾರಿಗಳ ಈ ಪ್ರಸ್ತಾಪಕ್ಕೆ ಅಮೃತ್ ಪೌಲ್ ವಿರೋಧ ಸೂಚಿಸಿದ್ದಾರೆ. ಈ ಬಗ್ಗೆ ಸಿಐಡಿ ಅಧಿಕಾರಿಗಳು ಹೈಕೋರ್ಟ್ ಅನುಮತಿ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ವ್ಯಾಪಂ ಎನ್ನುವ ಹಗರಣ ನಡೆದಿತ್ತು. ಮೆಡಿಕಲ್ ವಿದ್ಯಾರ್ಥಿಗಳ ಅರ್ಹತಾ ಪರೀಕ್ಷೆಯಲ್ಲಿ ನಡೆದಿದ್ದ ಹಗರಣದಲ್ಲಿ ಅದರ ಮುಖ್ಯಸ್ಥರೂ ತನಿಖೆಗೆ ಅಸಹಕಾರ ತೋರಿದ್ದಕ್ಕೆ ಮಂಪರು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಪಿಎಸ್ಐ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಕೈ ಬದಲಾಯಿಸಿದ್ದಾರೆಂಬ ಆರೋಪಕ್ಕೀಡಾಗಿರುವ ಅಮೃತ್ ಪೌಲ್ ಬಳಿಯಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಿಐಡಿ ಅಧಿಕಾರಿಗಳು ತಡಕಾಡುತ್ತಿದ್ದಾರೆ. ಪಿಎಸ್ಐ ಪರೀಕ್ಷೆ ನಡೆದು ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಇಡಲಾಗಿದ್ದ ಭದ್ರತಾ ಕೊಠಡಿ ಬೀಗದ ಕೀ ಹೊಂದಿದ್ದ ಎಡಿಜಿಪಿ ಅಮೃತ್ ಪೌಲ್, ಉತ್ತರ ಪತ್ರಿಕೆಯನ್ನು ತಿದ್ದುವುದಕ್ಕಾಗಿ ಕೀಯನ್ನು ತನ್ನ ಕೈಕೆಳಗಿನ ಅಧಿಕಾರಿಗಳಿಗೆ ನೀಡಿದ್ದರು. ಈ ಬಗ್ಗೆ ಬಂಧನಕ್ಕೊಳಗಾಗಿರುವ ಭದ್ರತಾ ಕೊಠಡಿ ಸಿಬಂದಿ ಸಿಐಡಿ ಅಧಿಕಾರಿಗಳಿಗೆ ಹೇಳಿಕೆ ನೀಡಿದ್ದು, ಇದನ್ನು ಬಲವಾದ ಸಾಕ್ಷ್ಯ ಎಂದು ಪರಿಗಣಿಸಿ ಅಮೃತ್ ಪೌಲ್ ಬಂಧನ ಮಾಡಲಾಗಿತ್ತು.
ಇದಲ್ಲದೆ, ರಾಜ್ಯದಲ್ಲಿ ದಾಖಲಾಗಿರುವ ಇತರ ನಾಲ್ಕು ಎಫ್ಐಆರ್ ಪ್ರಕರಣಗಳಿಗೆ ಸಂಬಂಧಿಸಿಯೂ ಅಮೃತ್ ಪೌಲ್ ಬಳಿ ಸಿಐಡಿ ಅಧಿಕಾರಿಗಳು ಮಾಹಿತಿ ಕೇಳುತ್ತಿದ್ದಾರೆ. ಅದರ ಬಗ್ಗೆ ಬಾಯಿ ಬಿಟ್ಟರೆ ಆಡಳಿತ ಬಿಜೆಪಿಯ ಪ್ರಭಾವಿ ನಾಯಕರೊಬ್ಬರ ಹೆಸರು ಮತ್ತು ಕಾಂಗ್ರೆಸ್ ನಾಯಕರ ಹೆಸರು ಕೂಡ ಬರಲಿದೆ ಎನ್ನಲಾಗುತ್ತಿದೆ. ಹೈಕೋರ್ಟ್ ನ್ಯಾಯಾಧೀಶರ ಸೂಚನೆಯಂತೆ ಸಿಐಡಿ ತಂಡವು ಕಾಲ ಕಾಲಕ್ಕೆ ತನಿಖೆಯ ಬಗ್ಗೆ ಮಾಹಿತಿ ನೀಡಬೇಕಾಗಿದ್ದು, ಅದರ ಕಾರಣದಿಂದ ಪಿಎಸ್ಐ ಅಕ್ರಮ ಪ್ರಕರಣ ಆಡಳಿತ ಪಕ್ಷಕ್ಕೂ ಸುತ್ತಿಕೊಳ್ಳುತ್ತಿದೆ. ಈಗಾಗಲೇ 34 ಆರೋಪಿಗಳ ಬಗ್ಗೆ 1975 ಪುಟದ ಸುದೀರ್ಘ ಚಾರ್ಜ್ ಶೀಟನ್ನು ಸಿಐಡಿ ಅಧಿಕಾರಿಗಳು ಕೋರ್ಟಿಗೆ ಸಲ್ಲಿಸಿದ್ದಾರೆ. ಈ ನಡುವೆ, ಎಂಟು ಮಂದಿ ಆರೋಪಿಗಳು ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ತೀರ್ಪು ಬರಲಿದೆ. ಅದೇ ಸಂದರ್ಭದಲ್ಲಿ ಹೈಕೋರ್ಟ್ ಮಂಪರು ಪರೀಕ್ಷೆಯ ಕುರಿತಾಗಿಯೂ ತೀರ್ಪು ನೀಡುವ ಸಾಧ್ಯತೆಯಿದೆ.
The CID, probing the Sub-Inspector scam) in Karnataka, is all set to conduct a lie-detector test (polygraph) on arrested ADGP Amrit Paul in the absence of cooperation from him, sources in the investigation agency said on Thursday.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm