ಬ್ರೇಕಿಂಗ್ ನ್ಯೂಸ್
21-07-22 10:38 pm HK News Desk ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಬಡ ವಿದ್ಯಾರ್ಥಿಗಳು ಓದುವ ವಸತಿ ಶಾಲೆಗಳನ್ನು ಪಿಯು ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶಿರಸಿ ತಾಲೂಕಿನ ಕಲ್ಲಿ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು. ಬಡವರು ಮತ್ತು ಪ್ರತಿಭಾವಂತ ಮಕ್ಕಳಿಗೆ ಮೊರಾರ್ಜಿ ಶಾಲೆಗಳಲ್ಲಿ 6ನೇ ತರಗತಿಯಿಂದ ಪಿಯು ಶಿಕ್ಷಣದ ವರೆಗೂ ವಿದ್ಯಾಭ್ಯಾಸ ದೊರೆಯುವಂತಾಗಬೇಕು ಎಂಬುದು ನಮ್ಮ ಆಶಯ. ಮೊರಾರ್ಜಿ ಶಾಲೆಗಳನ್ನು ಪಿಯು ವರೆಗೂ ವಿಸ್ತರಿಸುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗಿದೆ ಎಂದರು.
ವಿದ್ಯಾರ್ಥಿನಿಯರಿಗೆ ಈಗಾಗಲೇ ಓಬವ್ವ ಆತ್ಮರಕ್ಷಣಾ ಕಲೆಯೊಂದಿಗೆ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಇದಕ್ಕೆ ವಿದ್ಯಾರ್ಥಿನಿಯರು ಸಹ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಕಡಿಮೆ ಇದೆ. ಪ್ರಾಮಾಣಿಕ ಸೇವೆಯಿಂದಾಗಿ ಶಾಲೆಗಳೂ ಉತ್ತಮ ಮಟ್ಟದಲ್ಲಿ ನಡೆಯುತ್ತಿವೆ. ಅವರ ವೇತನ ಹೆಚ್ಚಿಸುವ ಕುರಿತಂತೆ ಯತ್ನ ನಡೆಯುತ್ತಿದ್ದು, ಹಣಕಾಸು ವಿಭಾಗದಿಂದ ಒಪ್ಪಿಗೆಗೆ ಕಾಯುತ್ತಿದ್ದೇವೆ ಎಂದರು.
ಕಳೆದ ಮಳೆಗಾಲದ ಅವಧಿಯಲ್ಲಿ ಪ್ರಕೃತಿ ವಿಕೋಪ ಅನುದಾನ ಅಡಿಯಲ್ಲಿ ಮಂಜೂರಾದ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಣವನ್ನು ಖಂಡಿತವಾಗಿಯೂ ಮಂಜೂರು ಮಾಡುತ್ತೇವೆ. ಆದರೆ, ಹಂತ ಹಂತವಾಗಿ ಬಿಡುಗಡೆ ಆಗುತ್ತಿದೆ. ಮೊದಲು ಆದ ಕಾಮಗಾರಿಗಳಿಗೆ ಮೊದಲು ಹಣ ಬಿಡುಗಡೆ ಆಗುತ್ತಿದ್ದು, ಗುತ್ತಿಗೆದಾರರು ಅವರ ಹಣದ ಸಲುವಾಗಿ ಆಲೋಚನೆ ಮಾಡಬೇಕಾಗಿಲ್ಲ ಎಂದರು. ಮೊರಾರ್ಜಿ ಶಾಲೆಯ ಭೋಜನಾಲಯಕ್ಕೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಲ್ಲಿಯೇ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿ, ಕುಶಲೋಪರಿ ವಿಚಾರಿಸಿದರು.
Kota Srinivasa Pujari, Minister-in-charge who visited Morarji Residential School in Shirasi taluk of Uttara Kannada district, visited the canteen of the school and had lunch with the students. Then inquired about the craft of the students.Minister Kota Srinivas Poojary has informed in Shirasi of Uttara Kannada district that he has decided to extend Morarji Desai Residential School to PUC. Morarji schools are a great platform for poor and talented children. He said that it is our wish that education should be available in one place from 6th standard to PUC.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm