ಬ್ರೇಕಿಂಗ್ ನ್ಯೂಸ್
22-07-22 04:57 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 22 : ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ಬಾರಿ ಮಗ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ನಾನು ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ ಎನ್ನುವ ಮೂಲಕ ಬಿಎಸ್ ಯಡಿಯೂರಪ್ಪ ಸ್ವಯಂ ರಾಜಕೀಯ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದು ವಿಜಯೇಂದ್ರ ಸ್ಪರ್ಧಿಸಲಿದ್ದಾನೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧಿಸಬೇಕೆಂಬ ಒತ್ತಡವಿದೆ. ಆದರೆ, ಇಲ್ಲಿನ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ ಎಂದು ಪರೋಕ್ಷವಾಗಿ ತಾವು ಸುದೀರ್ಘ ಸಮಯದಿಂದ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ತ್ಯಜಿಸುವ ಸುಳಿವನ್ನು ಯಡಿಯೂರಪ್ಪ ನೀಡಿದ್ದಾರೆ.
ಇದೇ ವೇಳೆ, ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿರುವುದರಿಂದ ಮತ್ತೆ ಸಚಿವರಾಗ್ತಾರೆಯೇ ಎಂಬ ಪ್ರಶ್ನೆಗೆ, ಅವರನ್ನು ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳುವುದು ಸಿ.ಎಂ. ಗೆ ಬಿಟ್ಟ ವಿಚಾರ. ಅದನ್ನು ಅವರೇ ನಿರ್ಧಾರ ಮಾಡಬೇಕು. ನಾನು ಅವರಿಗೆ ಬಿ ರಿಪೋರ್ಟ್ ಬಂದ ತಕ್ಷಣವೇ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದೇನೆ ಎಂದರು. ಈಶ್ವರಪ್ಪ ಅಣತಿಯಂತೆ ವಿಚಾರಣೆ ನಡೆದಿದೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಈ ವಿಷಯದ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಎಂದರು ಬಿ.ಎಸ್.ವೈ.
ನಿಮ್ಮ ಅಪ್ಪನಾಣೆಗೂ ಮುಖ್ಯಮಂತ್ರಿ ಆಗಲ್ಲ !
ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಇಬ್ಬರು ಯಾರೋ ಮುಖ್ಯಮಂತ್ರಿಗಳು ಎಂದು ಓಡಾಡುತ್ತಿದ್ದಾರೆ. ಅವರಿಗೆ ಒಂದೇ ಕಿವಿ ಮಾತನ್ನು ಹೇಳುವುದಕ್ಕೆ ಇಷ್ಟ ಪಡುತ್ತೇನೆ. ನಿಮ್ಮ ಅಪ್ಪನ ಆಣೆ ನೀವು ಮುಖ್ಯಮಂತ್ರಿ ಆಗುವ ಪ್ರಶ್ನೆ ಬರಲ್ಲ. ಕರ್ನಾಟಕ ರಾಜ್ಯದಲ್ಲಿ ನೂರಕ್ಕೆ ನೂರು ಬಿಜೆಪಿಗೆ ಬಹುಮತ ಬರುತ್ತದೆ. ಬಿಜೆಪಿಯವರೇ ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದಕ್ಕೆ ಯಾವುದೇ ಅನುಮಾನ ಬೇಡ. ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಹೇಳಿದರು.
ಪಕ್ಷದ ನಿರ್ಧಾರದಂತೆ ನಡೆದುಕೊಳ್ತೇನೆ ; ವಿಜಯೇಂದ್ರ
ತಂದೆ ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ತೇನೆ. ಅದನ್ನು ಆಧರಿಸಿಯೇ ನಾನು ಮುಂದಿನ ನಿರ್ಧಾರ ಮಾಡ್ತೇನೆ. ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡೋದು ನನ್ನ ಆದ್ಯ ಕರ್ತವ್ಯ. ಹಿಂದಿನಿಂದಲೂ ಅದನ್ನೇ ಮಾಡಿದ್ದೇನೆ. ಮುಂದೆನೂ ಮಾಡ್ತೇನೆ. ಶಿಕಾರಿಪುರದ ಮುಖಂಡರು, ಕಾರ್ಯಕರ್ತರು ತಂದೆಯ ಮೇಲೆ ಒತ್ತಡ ಹೇರಿದ್ದರು. ತಿಂಗಳ ಹಿಂದೆ ಬೆಂಗಳೂರಿಗೂ ಬಂದು, ಒತ್ತಡ ಕೂಡ ಹಾಕಿದ್ರು. ಅದರಂತೆ ತಂದೆಯವರು ಇಂದು ತೀರ್ಮಾನ ಪ್ರಕಟಿಸಿದ್ದಾರೆ. ಇದರ ಜೊತೆ ಪಕ್ಷ ಏನು ತೀರ್ಮಾನ ಮಾಡುತ್ತೆ. ಅದನ್ನು ಅಧರಿಸಿ, ನಾನು ನಿರ್ಧಾರ ಮಾಡ್ತಿನಿ ಎಂದರು.
ತಂದೆ ಮೇಲೆ ಸ್ಥಾನಕ್ಕಾಗಿ ಒತ್ತಡ ಹಾಕಿದ್ದೀರಾ ಎಂಬ ಪ್ರಶ್ನೆಗೆ, ನಾನು ತಂದೆ ಮೇಲೆ ಒತ್ತಡ ಹಾಕುವ ಪ್ರಶ್ನೆಯೇ ಉದ್ಭವಿಸಲ್ಲ. ಯಡಿಯೂರಪ್ಪನವರಿಗೆ ನಿವೃತ್ತಿ ಅನ್ನೋದಕ್ಕೆ ಸಂಬಂಧ ಇಲ್ಲ. ಅವರ ಡಿಕ್ಷನರಿಯಲ್ಲಿ ನಿವೃತ್ತಿ ಎನ್ನುವ ಪದ ಇಲ್ಲ. ಹಿಂದೆ ಕೂಡ ಬಿಜೆಪಿ ಸಂಘಟನೆ ಕೆಲಸ ಮಾಡಿದ್ರು, ಮುಂದೇನೂ ಮಾಡ್ತಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ವೇಳೆ ಹೇಳಿದ್ದರು. ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆ ಎಂದು. ಈ ಬಗ್ಗೆ ವಿಪಕ್ಷಗಳಿಗೆ ಸವಾಲು ಕೂಡ ಹಾಕಿದ್ದಾರೆ. ಅದರಂತೆ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದರು.
Senior Bharatiya Janata Party leader and former Karnataka chief minister BS Yediyurappa on Friday announced that he is giving up his Assembly constituency to his son BY Vijayendra and will not contest the next state elections. Yediyurappa said his son will now contest the election from Shikaripura Assembly constituency located in the state’s Shivamogga district.The BJP veteran called on the people of the state to support his son Vijayendra in the next election.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm