ಬ್ರೇಕಿಂಗ್ ನ್ಯೂಸ್
24-07-22 12:56 pm HK News Desk ಕರ್ನಾಟಕ
ಕೊಪ್ಪಳ, ಜುಲೈ 24 : ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಭಾನಾಪುರ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳು ಸೇರಿ ಒಂಬತ್ತು ಜನ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಹೊಡೆದು ಪರಾರಿಯಾಗಿತ್ತು. ಇತ್ತ ಸ್ಕಾರ್ಪಿಯೋ ಅಪ್ಪಚ್ಚಿಯಾಗಿದ್ದು ಅದರಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಾವು ಕಂಡಿದ್ದಾರೆ. ಗಂಭೀರ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ನಿವಾಸಿ ದೇವಪ್ಪ ಕೊಪ್ಪದ(62), ಅವರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತರು. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಕುಟುಂಬಸ್ಥರು ಕೊಪ್ಪಳದಲ್ಲಿ ಸಂಬಂಧಿಕರ ಮನೆಯಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ಬಿನ್ನಾಳ ಗ್ರಾಮಕ್ಕೆ ಹೊರಟಿದ್ದರು.
ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Karnataka Accident in Koppal, family of six die on spot, 5 lakh compensation ordered by CM. The family was travelling by a Scorpio car.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am