ಬ್ರೇಕಿಂಗ್ ನ್ಯೂಸ್
24-07-22 06:24 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ರಾಜ್ಯ ವಿಧಾನಸಭೆ ಚುನಾವಣೆಗೆ ದಿನ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ನಾಯಕರು ಸಿಎಂ ವಿಚಾರದಲ್ಲಿ ಗುದ್ದಾಟ ನಡೆಸುತ್ತಿರುವಾಗಲೇ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಡಿಸಿಎಂ ಪರಮೇಶ್ವರ್ ಪರಸ್ಪರ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಖರ್ಗೆ ನಿವಾಸದಲ್ಲಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಖರ್ಗೆ ಅವರ 80ನೇ ಹುಟ್ಟುಹಬ್ಬದ ನಿಮಿತ್ತ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಪರಮೇಶ್ವರ್ ಹುಟ್ಟುಹಬ್ಬದ ಶುಭ ಕೋರುವ ಹೆಸರಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮನೆಯೊಳಗೆ ಕುಳಿತು ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ವಿಚಾರದಲ್ಲಿ ಬಾಗಿಲು ಹಾಕ್ಕೊಂಡು ಇಬ್ಬರು ದಲಿತ ನಾಯಕರು ಚರ್ಚೆ ನಡೆಸಿದ್ದಾರೆ. ಆಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ನಮ್ಮ ಹೈಕಮಾಂಡ್ ವಿಜಯಪುರ, ಕಲಬುರ್ಗಿ, ಬೆಂಗಳೂರು, ಮೈಸೂರಿನಲ್ಲಿ ಇಲ್ಲ. ದೆಹಲಿಯಲ್ಲಿದೆ. ಅವರು ನೋಡಿಕೊಳ್ಳುತ್ತಾರೆ ಎಂದು ಚುಟುಕಾಗಿ ಉತ್ತರಿಸಿದ್ದಾರೆ.

ನೀವು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಆಗಬೇಕೇ ಎಂಬ ಬಗ್ಗೆ ಹೈಕಮಾಂಡ್ ಬಳಿ ಕೇಳಿಕೊಂಡು ಬಂದು ಹೇಳಬೇಕು ಎಂದು ಹೇಳಿ ನಗೆಚಟಾಕಿ ಹಾರಿಸಿದರು. ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದೆ. ಆದರೆ ಕೆಲವರು ಮನೆಗೇ ಬಂದು ಶುಭ ಹಾರೈಸುತ್ತಿದ್ದಾರೆ ಎಂದರು.
ಬಿಜೆಪಿ ಟೀಕೆಯ ಕುರಿತ ಪ್ರಶ್ನೆಗೆ, ಬಿಜೆಪಿ ಮೊನ್ನೆ ಹುಟ್ಟಿರುವ ಪಕ್ಷ. ನಮ್ಮ ಪಕ್ಷಕ್ಕೆ ದೊಡ್ಡ ಇತಿಹಾಸ ಇದೆ. ಯಾವಾಗ ನಿರ್ಣಯ ತೆಗೆದುಕೊಳ್ಳಬೇಕೆಂದು ನಮ್ಮ ಹೈಕಮಾಂಡಿಗೆ ಗೊತ್ತಿದೆ. ನಮ್ಮ ಪಕ್ಷದ ಬಗ್ಗೆ ಬಿಜೆಪಿಗೆ ಚಿಂತೆ ಯಾಕೆ ? ಅವರ ಪಕ್ಷದಲ್ಲಿ ಶಿಸ್ತು, ನಿಯಮ ಇದೆಯಾ.. ಅವರಿಂದ ಶಿಸ್ತು ಕಲಿಯಬೇಕೇ.. ಆರೇಳು ರಾಜ್ಯದಲ್ಲಿ ಜನರು ನಮ್ಮ ಪಕ್ಷಕ್ಕೆ ಮತ ನೀಡಿದರೂ, ಶಾಸಕರನ್ನು ಖರೀದಿಸಿ ಸರಕಾರ ನಡೆಸುತ್ತಾರೆ. ಇಂಥವರಿಂದ ನಾವು ಪಾಠ ಕಲಿಯಬೇಕೇ ಎಂದು ಪ್ರಶ್ನಿಸಿದರು.

ಪರಮೇಶ್ವರ್ ಮಾತನಾಡಿ, ಖರ್ಗೆ ಅವರು ಹಿರಿಯರು. ನನ್ನ ತಂದೆಗೂ ಅವರ ಜೊತೆ ಒಡನಾಟ ಇತ್ತು. ಒಂದೇ ಕುಟುಂಬದವರಂತೆ ಇದ್ದೇವೆ. 80ನೇ ಹುಟ್ಟುಹಬ್ಬದ ಶುಭ ಕೋರಲು ಬಂದಿದ್ದೆ. ಅದರ ಹೊರತಾಗಿ ರಾಜಕೀಯ ಯಾವುದೇ ಇಲ್ಲ ಎಂದು ಹೇಳಿದರು.
ಸಿಎಂ ಸ್ಥಾನ ಹೈಕಮಾಂಡ್ ನಿರ್ಣಯಿಸುತ್ತದೆ
ಸಿದ್ದರಾಮಯ್ಯ- ಡಿಕೆಶಿ ಸಿಎಂ ಸ್ಥಾನದ ಗುದ್ದಾಟದ ಕುರಿತು ಕೇಳಿದ್ದಕ್ಕೆ, ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು. 113 ಸ್ಥಾನಗಳು ಬಂದ ಬಳಿಕ ಸಿಎಂ ಸ್ಥಾನದ ಬಗ್ಗೆ ಚಿಂತನೆ ನಡೆಯಬೇಕು. ಅಷ್ಟಕ್ಕೂ ಸಿಎಂ ಯಾರಾಗಬೇಕೆಂದು ನಿರ್ಣಯಿಸುವುದು ಹೈಕಮಾಂಡ್. ಬಹುಮತ ಬಂದ ಬಳಿಕ ವೀಕ್ಷಕರು ಬಂದು ಶಾಸಕರ ಅಭಿಪ್ರಾಯ ಪಡೆದು ಕೇಂದ್ರ ನಾಯಕರಿಗೆ ಮಾಹಿತಿ ನೀಡುತ್ತಾರೆ. ಆಬಳಿಕ ಮುಖ್ಯಮಂತ್ರಿ ಬಗ್ಗೆ ಕೇಂದ್ರ ನಾಯಕರು ನಿರ್ಣಯ ಮಾಡುವುದು ವಾಡಿಕೆ. ಆ ಬಗ್ಗೆ ಈಗ ಯಾಕೆ ಮಾತನಾಡಬೇಕು. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಶ್ರಮಿಸಬೇಕಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ನಾನು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.
Mallikarjun Kharge and Parameshwara secret meeting amid War of words between DK Shivakumar and Siddaramaiah. Squabbling in the Congress' Karnataka unit continued between leaders loyal to state president D K Shivakumar and former chief minister Siddaramaiah over who should be the chief minister if the party wins power in next year's Assembly elections, with the former urging party members to 'first work to bring the party to power.'
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm