ಸಿಎಂ ಜಿಲ್ಲೆಯಲ್ಲಿರುವಾಗಲೇ ಫಾಜಿಲ್ ಕೊಲೆ ನಡೆದಿರುವುದು ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ; ಸಿದ್ದು ಹಿಗ್ಗಾಮುಗ್ಗ ತರಾಟೆ 

29-07-22 11:31 am       Bangalore Correspondent   ಕರ್ನಾಟಕ

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು.

ಬೆಂಗಳೂರು, ಜುಲೈ 29: ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.

If needed, will follow 'Yogi model', says Karnataka CM Bommai after BJP  worker's murder | Cities News,The Indian Express

Jnanendra becomes minister at last, KSE retains post | Deccan Herald

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Siddaramaiah slams CM Bommai on Twitter for the murder of Fazil in Surathkal in Mangalore. He also said first Home Minister should be terminated from the party or else there will be days where people can't even come out of their houses.