ಪ್ರವೀಣ್ ಹತ್ಯೆ ; ಪಿಎಫ್ಐ, ಎಸ್ಡಿಪಿಐ ನಿಷೇಧಕ್ಕಾಗಿ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ, 40ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸ್ ವಶಕ್ಕೆ 

30-07-22 01:14 pm       Bangalore Correspondent   ಕರ್ನಾಟಕ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಳೂರಿನ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.

ಬೆಂಗಳೂರು, ಜುಲೈ 30 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಳೂರಿನ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕಾರ್ಯಕರ್ತರ ಮನೆ ಬಾಗಿಲು ಒಡೆದು ಒಳನುಗ್ಗಲು ಯತ್ನಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ 40ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವರ ಮನೆ ಬಳಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ತಡೆಯಲು ಮುಂದಾಗಿದ್ದು ಭಾರೀ ತಳ್ಳಾಟ ನಡೆದಿದೆ. ಸಚಿವರು ಕಠಿಣ ನಿರ್ಧಾರ ತೆಗೆದುಕೊಳ್ಳಲು ಸೋತಿದ್ದಾರೆ. ಸರಣಿ ಹತ್ಯೆಗಳಿಗೆ ಇವರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿ ಧಿಕ್ಕಾರ ಕೂಗಿದ್ದಾರೆ. 

We have doubts on PFI, SDPI,' says Karnataka Home Minister Araga Jnanendra  on BJP worker's killing

Sandeep Patil takes charge as the Mangaluru Police Commissioner

ABVP planned JNU row in 2016 and shouted anti-national slogans: ex ABVP  members | SabrangIndia

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಎಬಿವಿಪಿ ಕಾರ್ಯಕರ್ತರು ಪೊಲೀಸರನ್ನು ಲೆಕ್ಕಿಸದೆ ಗೃಹ ಸಚಿವರ ಮನೆಯ ಗೇಟ್ ಗಳನ್ನು ತಳ್ಳಿ ಒಳನುಗ್ಗಿದ್ದು, ಮನೆಯ ಬಾಗಿಲನ್ನು ತೆಗೆಯಲು ಯತ್ನಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಅಲ್ಲಿ ಸೇರಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

40 ABVP activists have been arrested by the police after the ABVP activists protested against the Home Minister Araga Jnanendra demanding a ban on the SDPI and PFI after serial killing case in the state.ABVP workers protested near Minister Araga Jnanendra house in Jayamahal, Bengaluru since morning and expressed their anger against the home minister. They also tried to open the home minister’s door. When the police tried to stop them, there was an altercation between the police and the activists. Now it is known that 40 ABVP workers have been arrested.