ಬ್ರೇಕಿಂಗ್ ನ್ಯೂಸ್
30-07-22 05:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಜೆಸಿ ನಗರ ಠಾಣೆ ವ್ಯಾಪ್ತಿಯಲ್ಲಿರುವ ಗೃಹ ಸಚಿವರ ನಿವಾಸದ ಮುಂದೆ ಇಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪಿಎಫ್ಐ ಮತ್ತು ಎಸ್ಡಿಪಿಐ ನಿಷೇಧ ಮಾಡಬೇಕೆಂದು ಒತ್ತಾಯಿಸಿ ಗೃ ಸಚಿವರ ವೈಫಲ್ಯ ವಿರೋಧಿಸಿ ಪ್ರತಿಭಟನೆ ನಡೆಸಲಾಗಿತ್ತು. ಕೊನೆಗೆ ನಿವಾಸದ ಬಾಗಿಲು ಒಡೆದು ನುಗ್ಗಲು ಯತ್ನಿಸಿದರೆಂದು 40ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಘಟನೆ ಗುಪ್ತಚರ ವೈಫಲ್ಯದಿಂದಾಗಿ ನಡೆದಿತ್ತು ಎನ್ನುವ ಅಂಶವನ್ನು ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ ಆಬಳಿಕ ಮಾಧ್ಯಮದ ಮುಂದೆ ಒಪ್ಪಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವರು, ಪ್ರತಿಭಟನೆ ಸಂದರ್ಭದಲ್ಲಿ ತಾನು ನಿವಾಸದಲ್ಲಿ ಇರಲಿಲ್ಲ. ಯಾರೋ ಕಿಡಿಗೇಡಿಗಳು ಪ್ರತಿಭಟನೆ ನಡೆಸಿದ್ದಾರೆ. ಅವರು ಎಬಿವಿಪಿ ಕಾರ್ಯಕರ್ತರೇ ಅನ್ನುವ ಬಗ್ಗೆ ಸಂಶಯ ಇದೆ. ಅದನ್ನು ವೆರಿಫೈ ಮಾಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದರು.
ಇದರ ಬೆನ್ನಲ್ಲೇ ಪೊಲೀಸರು ಜೆಸಿ ನಗರ ಠಾಣೆಯಲ್ಲಿ 30 ಮಂದಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ರಿಜಿಸ್ಟರ್ ಮಾಡಿದ್ದಾರೆ. ಐಪಿಸಿ ಸೆಕ್ಷನ್ 448, 143, 147, 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವ ವಿದ್ಯಾರ್ಥಿನಿ ಸೇರಿದಂತೆ 30 ಮಂದಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಹಿಂದು ಕಾರ್ಯಕರ್ತರ ಸರಣಿ ಹತ್ಯೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ತಮ್ಮದೇ ಸರಕಾರ ಇದ್ದರೂ, ಎಫ್ಐಆರ್ ದಾಖಲು ಮಾಡಿರುವುದು ರಾಜ್ಯಾದ್ಯಂತ ಎಬಿವಿಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಸಾಮಾನ್ಯವಾಗಿ ಯಾವುದೇ ಪಕ್ಷದ ಪ್ರತಿಭಟನೆ ಸಂದರ್ಭದಲ್ಲೂ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಆಬಳಿಕ ಬಿಟ್ಚು ಕಳುಹಿಸುತ್ತಾರೆ. ವಿಷಯಾಧಾರಿತ ಪ್ರತಿಭಟನೆಗಳ ಸಂದರ್ಭದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಳ್ಳುವುದಿಲ್ಲ. ಅದರಲ್ಲೂ ಎಬಿವಿಪಿ ಸಂಘ ಪರಿವಾರದ್ದೇ ವಿದ್ಯಾರ್ಥಿ ಸಂಘಟನೆಯಾಗಿದ್ದು, ಇವರದೇ ಆಡಳಿತದಲ್ಲಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿರುವುದು ನೋವಿಗೆ ಕಾರಣವಾಗಿದೆ.
In an embarrassing turn of events for the BJP and the state government, a group of activists from the party's student wing Akhil Bharatiya Vidyarthi Parishad (ABVP) held a protest at Home Minister Araga Jnanendra's official residence in the City on Saturday, demanding a ban on Popular Front of India (PFI) and its affiliates, who they alleged had a role in the murders of Hindutva activists.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm