ಪ್ರವೀಣ್ ಹತ್ಯೆ ಪ್ರಕರಣ ; ಪೊಲೀಸರ ಕಾರ್ಯವೈಖರಿ ಬಗ್ಗೆ ಡಿಜಿಪಿಗೆ ಮುಖ್ಯಮಂತ್ರಿ ತರಾಟೆ 

30-07-22 08:12 pm       Bangalore Correspondent   ಕರ್ನಾಟಕ

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಇನ್ನೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ವರಿಷ್ಠ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.‌ 

ಬೆಂಗಳೂರು, ಜುಲೈ 30 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಇನ್ನೂ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ವರಿಷ್ಠ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.‌ 

ಶನಿವಾರ ಬೆಳಗ್ಗೆ ಡಿಜಿಪಿ ಪ್ರವೀಣ್ ಸೂದ್ ಹಾಗೂ ಗುಪ್ತಚರ ಇಲಾಖೆ ಮುಖ್ಯಸ್ಥ ಬಿ.ದಯಾನಂದ್ ಅವರು ಮುಖ್ಯಮಂತ್ರಿಯ ರೇಸ್ ವೀವ್ ನಿವಾಸದಲ್ಲಿ ಸಿಎಂ ಬೊಮ್ಮಾಯಿ‌ ಅವರನ್ನು ಭೇಟಿಯಾದರು. ಈ ವೇಳೆ ಸಿಎಂ ಬೊಮ್ಮಾಯಿ‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Coronavirus: Karnataka DGP's appeal to philanthropists wanting to support |  Deccan Herald

ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಪ್ರತಿಭಟನೆಯ ಬಗ್ಗೆ ರಾಜ್ಯ ಗುಪ್ತಚರ ವಿಭಾಗ, ಪೊಲೀಸ್ ವಿಭಾಗಗಳಿಗೆ ಮಾಹಿತಿಯೇ ಗೊತ್ತಿಲ್ಲ. ಹೀಗಾಗಿ ಇಬ್ಬರೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

Karnataka: BJP Yuva Morcha worker Praveen Nettaru hacked to death by  bike-borne attackers | India News – India TV

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಪೊಲೀಸರ ತನಿಖೆಯ ವೈಖರಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ನಾಲ್ಕು ದಿನಗಳಾಗಿದರೂ ಆರೋಪಿಗಳನ್ನು ಬಂಧಿಸಿಲ್ಲ. ಯಾವ ರೀತಿ ತನಿಖೆ ಮಾಡುತ್ತಿದ್ದೀರಾ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.

Praveen Bellare Murder case,   CM Bommai angry at Alok Kumara ADGP for delay in arresting accused even after five days. Also Intelligence state commissioner  has also been slammed for failure.