ಬುಧವಾರ ರಾತ್ರಿಯೇ ಬೆಂಗಳೂರಿಗೆ ಅಮಿತ್ ಷಾ ; ರಾಜ್ಯ ಬಿಜೆಪಿ ಸರ್ಜರಿ ಬಗ್ಗೆ ನಿರ್ಣಯ ಸಾಧ್ಯತೆ 

02-08-22 10:47 pm       Bangalore Correspondent   ಕರ್ನಾಟಕ

ಒಂದೆಡೆ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡಿದ್ದರೆ, ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ.

ಬೆಂಗಳೂರು, ಆಗಸ್ಟ್ 2: ಒಂದೆಡೆ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡಿದ್ದರೆ, ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇಂಥ ಹೊತ್ತಲ್ಲೇ ಗೃಹ ಸಚಿವ ಅಮಿತ್ ಷಾ ದಿಢೀರ್ ಆಗಿ ರಾಜ್ಯಕ್ಕೆ ಬರುತ್ತಿದ್ದಾರೆ. ‌

Litterateurs urge K'taka CM to 'establish peace' in State by 'protecting'  Muslims

ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದನ್ನು ದೃಢ ಪಡಿಸಿದ್ದಾರೆ. ಆಗಸ್ಟ್ 4ರಂದು ಬೆಂಗಳೂರಿನ ಖಾಸಗಿ ಹೋಟಲ್‌ನಲ್ಲಿ ನಡೆಯಲಿರುವ 'ಸಂಕಲ್ಪದಿಂದ ಸಿದ್ಧಿ' (ಸಂಕಲ್ಪ್ ಸೇ ಸಿದ್ಧಿ) ಸಮಾವೇಶದ ಮೂರನೇ ಆವೃತ್ತಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಬುಧವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದಿದ್ದಾರೆ. 

What Stops the Government From Reopening Bengaluru's HAL Airport?

ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ, ಬುಧವಾರ ರಾತ್ರಿ 8 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ ಹೊರಟು ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರು ಎಚ್‌ಎಎಲ್ ನಿಲ್ದಾಣ ತಲುಪಲಿದ್ದಾರೆ. ನಂತರ ರೇರ್ಸ್‌ ಕೋರ್ಸ್ ರಸ್ತೆಯ ತಾಜ್‌ ವೆಸ್ಟೆಂಡ್‌ ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 11 ಗಂಟೆಯ ಕಾರ್ಯಕ್ರಮ ಮುಗಿಸಿ ಸಂಜೆ ವೇಳೆಗೆ ದೆಹಲಿಗೆ ವಾಪಸ್‌ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಇದರ ನಡುವೆಯೇ, ರಾಜ್ಯ ಬಿಜೆಪಿ ಮತ್ತು ಕಾರ್ಯಕರ್ತರ ಆಕ್ರೋಶದ ಬಗ್ಗೆ ಅಮಿತ್ ಷಾ ವರದಿ ಪಡೆದುಕೊಳ್ಳಲಿದ್ದು ಒಂದೇ ವಾರದಲ್ಲಿ ಆ್ಯಕ್ಷನ್ ತಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ಅಂಗಳದಲ್ಲಿದ್ದು ಯಾವ ನಿರ್ಧಾರ ತಗೊಳ್ತಾರೆ ಎಂಬ ಕುತೂಹಲ ಎದ್ದಿದೆ.

Amit Shah to visit Bangalore on August 6th, chances of surgery in BJP party.