ತಲಕಾವೇರಿ : ಪವಿತ್ರ ತೀರ್ಥ ಸ್ನಾನಕ್ಕಾಗಿ ಕೊರೊನಾ ಟೆಸ್ಟ್ ಕಡ್ಡಾಯ!!

03-10-20 09:54 pm       Headline Karnataka News Network   ಕರ್ನಾಟಕ

ಅಕ್ಟೋಬರ್ 17 ರಂದು ತಲಕಾವೇರಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್​ ಮಾಡುವುದಲ್ಲದೆ ಟೆಸ್ಟ್​ನ ವರದಿ ನೆಗೆಟಿವ್​ ಎಂದಿದ್ದರಷ್ಟೇ ಒಳಗೆ ಪ್ರವೇಶಿಸಲು ಅವಕಾಶ

ಕೊಡಗು,ಅಕ್ಟೋಬರ್.03 : ಕಾವೇರಿ ಉಗಮ ಸ್ಥಳ ತಲಕಾವೇರಿಯ  ಪವಿತ್ರ ತೀರ್ಥ ಸ್ನಾನಕ್ಕಾಗಿ  ಭಕ್ತಾಧಿಗಳಿಗೆ  ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದರಷ್ಟೇ ಪ್ರವೇಶಕ್ಕೆ ಅವಕಾಶ ಕೊಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ  ವಿ. ಸೋಮಣ್ಣ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವ ವಿಚಾರವಾಗಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಸಚಿವ ವಿ. ಸೋಮಣ್ಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚು ಜನ ಸೇರಿದರೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ. ತೀರ್ಥೋದ್ಭವ ವೇಳೆ ಕಡಿಮೆ ಜನರಿಗೆ ಅವಕಾಶ ನೀಡಲಾಗುವುದು. ಬ್ರಹ್ಮಕುಂಡಿಕೆ ಮುಂಭಾಗದ ಕಲ್ಯಾಣಿಯಲ್ಲಿ ತೀರ್ಥಸ್ನಾನ ನಿಷೇಧಿಸಲಾಗಿದೆ. ತೀರ್ಥೋದ್ಭವ ಬಳಿಕ ಅರ್ಚಕರು ತೀರ್ಥ ಪ್ರೋಕ್ಷಣೆ ಮಾಡುತ್ತಾರೆ' ಎಂದು ತಿಳಿಸಿದ್ದಾರೆ.

ಇನ್ನು  ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಯನ್ನು ಸಂಪ್ರದಾಯದಂತೆ  ಆಚರಿಸುವ ಜೊತೆಗೆ  ಕೋವಿಡ್-19 ಸಂಬಂಧ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.