ಬ್ರೇಕಿಂಗ್ ನ್ಯೂಸ್
08-08-22 05:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8 : ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಪರೀಕ್ಷಾ ಫಲಿತಾಂಶವನ್ನು ಇದೇ ಆಗಸ್ಟ್ ಒಳಗೆ ನೀಡುವ ಗುರಿ ಇದೆ. ಅಕ್ಟೋಬರ್ ಅಂತ್ಯದ ವೇಳೆಗೆ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದ್ದು, ಇಲಾಖೆಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಆಗಸ್ಟ್ 7ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಲಾಖೆಯ ಪ್ರಗತಿ ಬಗ್ಗೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.
ಕೋವಿಡ್-19 ಕಾರಣ ಶಾಲಾ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ದೇಶದಲ್ಲೇ ಮೊದಲು 'ಕಲಿಕಾ ಚೇತರಿಕೆ' ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮತ್ತು ಸುಧಾರಣೆ ತರಲಿರುವ 'ರಾಷ್ಟ್ರೀಯ ಶಿಕ್ಷಣ ನೀತಿ-2020'ನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 8,101 ಕೊಠಡಿ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 3,000 ರೂ. ಹೆಚ್ಚಳ ಮಾಡಲಾಗಿದೆ. ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ ಮಾಡಲಾಗಿದೆ.
ಅಕ್ಷರ ದಾಸೋಹ ಬಿಸಿಯೂಟ ನೌಕರರ ಗೌರವ ಸಂಭಾವನೆಯನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. 2022-23ನೇ ಸಾಲಿನಲ್ಲಿ 32,159 ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲಾಗುತ್ತಿದೆ. ಇದೇ ಸಾಲಿನಲ್ಲಿ ಪಿಯು ಕಾಲೇಜುಗಳಿಗೆ 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ. 1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ 'ಪ್ರಧಾನಮಂತ್ರಿ ಪೋಷಣ್ ಶಕ್ತಿ ಅಭಿಯಾನ' ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣು/ಚಿಕ್ಕಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯಲು ಶಾಲಾ ವಾಹನ ಖರೀದಿಗೆ 'ಶಾಸಕರ ಪ್ರದೇಶಾಭಿವೃದ್ಧಿ ನಿಧಿ' ಬಳಸಿಕೊಳ್ಳಲು ಅನುಮತಿಸಲಾಗಿದೆ. ಮುಂಬಡ್ತಿ ಸಂಬಂಧಿಸಿದಂತೆ ಸರ್ಕಾರಿ ಶಾಲೆಗಳ ಶಿಕ್ಷಕರ ಹಲವು ವರ್ಷಗಳ ಬೇಡಿಕೆ ಈಡೇರಿಸಲಾಗಿದೆ. ಸರ್ಕಾರಿ ಪಿಯು ಕಾಲೇಜುಗಳಿಗೆ ವಿದ್ಯಾರ್ಥಿಯನಿಯರ ದಾಖಲಾತಿ ಶುಲ್ಕ ಪಾವತಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಕೌನ್ಸಿಲಿಂಗ್ ಮೂಲಕ 23 ಸಾವಿರಕ್ಕೂ ಹೆಚ್ಚು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಅವರ ಸೇವಾನುಭವದ ಆಧಾರದ ಮೇಲೆ ಮುಂಬಡ್ತಿ ಬೇಡಿಕೆ ಈಡೇರಿಸಲಾಗುತ್ತಿದೆ. ಅನುದಾನಿತ ಶಾಲೆಗಳಲ್ಲಿ 2015ರ ಡಿಸೆಂಬರ್ 31ರ ಪೂರ್ವದಲ್ಲಿ ಖಾಲಿಯಾಗಿರುವ ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಎರಡು ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದ ಬಿಸಿ ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ'ಯನ್ನು 'ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ' ಎಂದು ಮರುನಾಮಕರಣ ಮಾಡಿದ್ದು ಅದೇ ಹೆಸರಲ್ಲಿ ಮುಂದೆ ಗುರುತಿಸಲ್ಪಡಲಿದೆ ಎಂದು ತಿಳಿಸಿದ್ದಾರೆ.
Primary and Secondary Education Minister B C Nagesh, who completed one year after heading the Education Department on Sunday, has announced that the results of the examinations held for recruiting 15,000 teachers to fill up the vacancies in government schools will be published by the end this month and expressed the hope of releasing the appointment lists by the end of October.The minister, who has come out with a progress report of his one-year tenure in Bengaluru on Monday, said a total of 8,101 classrooms in government schools and colleges were being constructed.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am