ಬ್ರೇಕಿಂಗ್ ನ್ಯೂಸ್
10-08-22 03:14 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 10: ನಾಲ್ವರನ್ನು ಕೊಲೆಗೈದು ಜೀವಾವಧಿ ಶಿಕ್ಷೆಗೊಳಗಾಗಿರುವ ವಾಮಂಜೂರು ಪ್ರವೀಣನನ್ನು ಜೈಲಿನಿಂದ ಬಿಡುಗಡೆ ಮಾಡಬಾರದು ಎಂದು ಮನೆಯವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಪ್ರವೀಣ್ ನನ್ನು ಯಾವುದೇ ಕಾರಣಕ್ಕೂ ಜೈಲಿನಿಂದ ಬಿಡುಗಡೆ ಮಾಡಬಾರೆಂದು ಒತ್ತಾಯಿಸಿ ಆತನ ಮನೆಯವರು ಬುಧವಾರ ಬೆಳಗ್ಗೆ ಗೃಹ ಸಚಿವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರವೀಣ್ ಜೈಲಿನಿಂದ ಹೊರಗೆ ಬಂದರೆ ತಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಮನೆಯವರು ಹೇಳುತ್ತಿದ್ದಾರೆ. ಪ್ರವೀಣನಿಗೆ ಗಲ್ಲು ಶಿಕ್ಷೆ ಆಗಿತ್ತು. ಆನಂತರ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಬದಲಾವಣೆ ಮಾಡಿತ್ತು. ಅದಕ್ಕೂ ಮೊದಲು ರಾಷ್ಟ್ರಪತಿಯವರು ಗಲ್ಲು ಶಿಕ್ಷೆಯನ್ನು ಎತ್ತಿಹಿಡಿದಿದ್ದರು. ಈಗ ನಮಗೆ ಆತನ ಹಿನ್ನೆಲೆ ಗೊತ್ತಾಗಿದೆ ಎಂದರು.
ಬೆಳಗಾವಿ ಜೈಲಿನಿಂದ ಕರೆದೊಯ್ಯುವಾಗ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋಗಿದ್ದ. ಗೋವಾದಲ್ಲಿ ತಲೆಮರೆಸಿಕೊಂಡು ಅಲ್ಲಿ ಮದುವೆಯಾಗಿ ಮಗು ಹೊಂದಿದ್ದಾನೆಂದು ಮನೆಯವರು ಹೇಳುತ್ತಿದ್ದಾರೆ. ಸರಕಾರದ ಹಳೆಯ ಆದೇಶದಲ್ಲಿ 14 ವರ್ಷಗಳ ಜೈಲು ಶಿಕ್ಷೆಯ ಬಳಿಕ ಸನ್ನಡತೆಯ ಆಧಾರದಲ್ಲಿ ಕೈದಿಯನ್ನು ಬಿಡುಗಡೆ ಮಾಡಲು ಅವಕಾಶ ಇದೆ.
ವಾಮಂಜೂರು ಪ್ರವೀಣನದ್ದು ವಿಶೇಷ ಪ್ರಕರಣ. ಈ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆದಿದ್ದೇನೆ. ಕಾನೂನು ಪ್ರಕಾರ ಏನು ಮಾಡಲು ಸಾಧ್ಯವೋ, ಅದನ್ನು ಮಾಡುತ್ತೇವೆ. ಕೊಲೆ, ಅತ್ಯಾಚಾರ ಮಾಡಿದ ಆರೋಪಿಗಳನ್ನು ಬಿಡುಗಡೆ ಮಾಡಬಾರದೆಂದು ಸಂಪುಟದಲ್ಲಿ ನಿರ್ಣಯಿಸಿ ನಿಯಮ ಮಾಡಿದ್ದೇವೆ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಬಿಡುಗಡೆಗೆ ಅವಕಾಶ ಇಲ್ಲ. ಸರಕಾರದ ಈ ಹಿಂದಿನ ಆದೇಶದ ಪ್ರಕಾರ ಬಿಡುಗಡೆ ಪ್ರಸ್ತಾಪ ಬಂದಿದೆ. ಈ ಬಗ್ಗೆ ಕಾನೂನು ಪ್ರಕಾರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ.
Mangalore Murderer Praveen Vamanjoor who is all set to be released on Aug 15th from jail has now got strong objection from his family members to not release him from the jail as he killed four of his own family members, Home Minister Araga will now discuss the matter if connection to release him or not.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm