ಬ್ರೇಕಿಂಗ್ ನ್ಯೂಸ್
11-08-22 05:49 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರಚಿಸಲಾಗಿದ್ದ ಎಸಿಬಿ ತನಿಖಾ ಘಟಕವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ್ದು ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ವಿಲೀನಗೊಳಿಸುವಂತೆ ಆದೇಶ ಹೊರಡಿಸಿದೆ. ಅಲ್ಲದೆ, ಎಸಿಬಿಯಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಿದ್ದು, ರಾಜ್ಯದ ಎಲ್ಲೆಡೆ ಇದ್ದ ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಪುನರ್ ಚಾಲನೆಗೊಳ್ಳುವಂತೆ ಆದೇಶದಲ್ಲಿ ಹೇಳಿದೆ.
ಆದೇಶ ಪ್ರಕಾರ, ಎಸಿಬಿ ಘಟಕದಲ್ಲಿರುವ ಎಲ್ಲ ಪೊಲೀಸರು ಲೋಕಾಯುಕ್ತ ವ್ಯಾಪ್ತಿಗೆ ಬರಲಿದ್ದಾರೆ. ಇದುವರೆಗೆ ಎಸಿಬಿ ನಡೆಸಿರುವ ತನಿಖೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ತಕ್ಷಣವೇ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾ. ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿದೆ.
2016ರ ಮಾ.14ರಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಅಧಿಕಾರ ಮೊಟಕುಗೊಳಿಸಿ ಹೊಸತಾಗಿ ಎಸಿಬಿ ರಚಿಸಿ ಆದೇಶ ಹೊರಡಿಸಿತ್ತು. ಆದರೆ ಎಸಿಬಿ ರಚನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದವು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅಪರಾಧ ದಾಖಲಿಸಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಸಾಂವಿಧಾನಿಕ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿದ್ದ ರಾಜ್ಯ ಸರಕಾರದ ಆದೇಶವನ್ನು ಒಂದೇ ವಾರದಲ್ಲಿ 2016ರ ಮಾ.19ರಂದು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಪ್ರಕರಣದ ಕುರಿತು ಸುದೀರ್ಘ ವಾದ ಆಲಿಸಿದ ಬಳಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್, ಎಸಿಬಿ ರಚನೆಯನ್ನೇ ರದ್ದುಗೊಳಿಸಿದೆ.
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ್ದು ಹೈಕೋರ್ಟ್ ತೀರ್ಮಾನವನ್ನು ಗೌರವಿಸುತ್ತೇನೆ. ಪೂರ್ಣ ಪ್ರಮಾಣದ ಆದೇಶ ನೋಡಿದ ಮೇಲೆ ಪ್ರತಿಕ್ರಿಯಿಸುತ್ತೇನೆ. ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆ. ನಮ್ಮ ರಾಜ್ಯದಲ್ಲಿ ಮಾತ್ರ ಎಸಿಬಿ ಇರಲಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಹೇಳಿದ್ದಾರೆ.
In a significant judgement, the High Court of Karnataka on Thursday abolished the Anti Corruption Bureau (ACB), formed by the state government in 2016 by withdrawing the Lokayukta police wing’s power under Prevention of Corruption (PC) Act
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm