ಬ್ರೇಕಿಂಗ್ ನ್ಯೂಸ್
12-08-22 11:45 am Bengalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೋಡಗನ ಕೋಳಿ ನುಂಗಿತ್ತಾ.. ಕಾಡು ಕುದುರೆ ಓಡಿ ಬಂದಿತ್ತಾ.. ಇತ್ಯಾದಿ ಶಿಶುನಾಳ ಶರೀಫರ ಪ್ರಸಿದ್ಧ ತತ್ವಪದಗಳನ್ನು ಹಾಡಿ ಜನಮಾನಸದಲ್ಲಿ ಖ್ಯಾತಿ ಗಳಿಸಿದ್ದ ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಇದ್ದುದರಿಂದ ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಯಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗಲೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಸುಬ್ಬಣ್ಣ ಅವರ ಮೂಲ ಹೆಸರು ಜಿ.ಸುಬ್ರಹ್ಮಣ್ಯಂ. ಗಣೇಶ್ ರಾವ್ ಹಾಗೂ ರಂಗನಾಯಕಮ್ಮ ಅವರ ಮಗನಾದ ಸುಬ್ಬಣ್ಣ ಶಿವಮೊಗ್ಗ ನಗರದಲ್ಲಿ 1938ರಲ್ಲಿ ಜನಿಸಿದರು. ಬಿ.ಎ., ಬಿ.ಕಾಂ., ಎಲ್.ಎಲ್.ಬಿ. ಪದವಿ ಪಡೆದಿದ್ದ ಅವರು ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ್ದರು. ಬಳಿಕ ನೋಟರಿಯಾಗಿಯೂ ಕೆಲಸ ಮಾಡಿದ್ದರು. ಶಾಲಾ ದಿನಗಳಲ್ಲಿಯೇ ಹಾಡುವುದನ್ನು ರೂಢಿ ಮಾಡಿಕೊಂಡಿದ್ದ ಸುಬ್ಬಣ್ಣ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು. ಆನಂತರ, ವಕೀಲಿ ವೃತ್ತಿಯನ್ನೇ ಬಿಟ್ಟು ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸುಬ್ಬಣ್ಣ 1963ರಲ್ಲಿ ಆಕಾಶವಾಣಿ ಗಾಯಕರಾಗಿ ಸೇರಿದ್ದರು. ಬಳಿಕ ಹಿನ್ನೆಲೆ ಗಾಯಕರಾಗಿ ಸಿನಿಮಾ ರಂಗಕ್ಕೂ ಸುಬ್ಬಣ್ಣ ಖ್ಯಾತಿ ಗಳಿಸಿದ್ದರು.
ಸುಗಮ ಸಂಗೀತದ ಸಾಧನೆಗಾಗಿ 1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ್ದರು. ಆಕಾಶವಾಣಿ ಪ್ರಸಾರ ಮಾಡಿದ ಜನಪ್ರಿಯ ಕಾರ‍್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾಗಿದ್ದರು. ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡೆಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ.
Noted Kannada singer Shivamogga Subbanna passed away following a heart attack at a hospital here on Thursday night, sources close to the family said.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm