Breaking: ಬೆಳ್ಳಂಬೆಳಗ್ಗೆ ಡಿಕೆಶಿಗೆ ಶಾಕ್ ; ಮನೆ ಮೇಲೆ ಸಿಬಿಐ ದಾಳಿ

05-10-20 10:17 am       Bangalore Correspondent   ಕರ್ನಾಟಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಬೆಂಗಳೂರು, ಅ.5: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.