ಬ್ರೇಕಿಂಗ್ ನ್ಯೂಸ್
22-08-22 01:50 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಇಪ್ಪತ್ತು ವರ್ಷಗಳ ಹಿಂದೆ ನಡೆದಿದ್ದ ಬಿಲ್ಡರ್ ಸುಬ್ಬರಾವ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಮೇಲಿನ ಆರೋಪ ಖುಲಾಸೆಗೊಂಡಿದೆ.
2001ರಲ್ಲಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಸುಬ್ಬರಾಜು ಎಂಬ ಬಿಲ್ಡರ್ ಕೊಲೆಯಾಗಿತ್ತು. ಪ್ರಕರಣದಲ್ಲಿ ರವಿ ಪೂಜಾರಿ ಕೂಡ ಆರೋಪಿಯಾಗಿದ್ದ. ಮುತ್ತಪ್ಪ ರೈ ಅಣತಿಯಂತೆ ರವಿ ಪೂಜಾರಿ ತನ್ನ ಬಂಟರಾದ ಯೂಸುಫ್ ಬಚಖಾನ್ ಮೂಲಕ ಕೃತ್ಯ ಮಾಡಿಸಿದ್ದ. ಪ್ರಕರಣದಲ್ಲಿ ಮುತ್ತಪ್ಪ ರೈ ಮೇಲಿನ ಆರೋಪ ಮೊದಲೇ ಖುಲಾಸೆಯಾಗಿತ್ತು. ಎರಡು ವರ್ಷಗಳ ಹಿಂದೆ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದ ರವಿ ಪೂಜಾರಿಯನ್ನು ಕೊಲೆ ಪ್ರಕರಣದಲ್ಲಿ ಕೋರ್ಟಿಗೆ ಹಾಜರು ಮಾಡಲಾಗಿತ್ತು. ಆದರೆ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಬಿಲ್ಡರ್ ಅನ್ನು ಕೊಲ್ಲಲು 2001 ಜನವರಿ 5ಕ್ಕೆ ಮುಂಚೆ ರವಿ ಪೂಜಾರಿ ಮತ್ತಿತರ ಆರೋಪಿಗಳು ಸಂಚು ರೂಪಿಸಿದ್ದರು ಎನ್ನುವುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇಲ್ಲ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. 2001, ಜನವರಿ 5ರಂದು ಬಿಲ್ಡರ್ ಸುಬ್ಬರಾಜು ಅವರನ್ನು ಶೇಷಾಧ್ರಿಪುರಂನ ಅವರ ಕಚೇರಿಯಲ್ಲೇ ಕೊಲೆ ಮಾಡಲಾಗಿತ್ತು. ಸುಬ್ಬರಾಜು ಅವರ ಇಬ್ಬರು ಮಕ್ಕಳ ಕಣ್ಣೆದುರೇ ಘಟನೆ ನಡೆದಿತ್ತು.
ಬೆಂಗಳೂರಿನಲ್ಲಿ ಪ್ರತಿಷ್ಠಿತ ಪ್ರದೇಶದಲ್ಲಿ ಸುಬ್ಬರಾಜು ಆಸ್ತಿ ಖರೀದಿಗೆ ಮುಂದಾಗಿದ್ದರು. ಆದರೆ ಈ ಪ್ರಸ್ತಾಪಕ್ಕೆ ದುಬೈನಲ್ಲಿದ್ದೇ ಬೆಂಗಳೂರಿನ ಭೂಗತಲೋಕ ಆಳುತ್ತಿದ್ದ ಮುತ್ತಪ್ಪ ರೈಯಿಂದ ಸುಬ್ಬರಾಜುಗೆ ಬೆದರಿಕೆ ಇತ್ತು. ರವಿ ಪೂಜಾರಿಯನ್ನು ಬಳಸಿ ಮುತ್ತಪ್ಪ ರೈ ಸುಬ್ಬರಾಜು ಹತ್ಯೆ ಮಾಡಿಸಿದ್ದರು ಎಂಬ ಆರೋಪ ಇತ್ತು.
ರವಿ ಪೂಜಾರಿ ಇತರ ಏಳು ಮಂದಿ ಜೊತೆ ಸೇರಿ ಸುಬ್ಬರಾಜು ಹತ್ಯೆಗೆ ಸ್ಕೆಚ್ ಹಾಕಿದ್ದ. ಮುಂಬೈನ ಶಾರ್ಪ್ ಶೂಟರ್ ಆಗಿದ್ದ ಯೂಸುಫ್ ಬಚಕಾನ ಮತ್ತು ನಿತಿನ್ ಸಾವಂತ್ ಎಂಬಿಬ್ಬರು ಶೂಟರ್‌ಗಳನ್ನು ನೇಮಿಸಲಾಗಿತ್ತು. ಈ ಇಬ್ಬರು ಶೂಟರ್‌ಗಳಿಗೆ ಹವಾಲಾ ಜಾಲದ ಮೂಲಕ ಗಿಫ್ಟ್ ಪ್ಯಾಕೆಟ್‌ನೊಳಗೆ 0.9 ಎಂಎಂ ಪಿಸ್ತೂಲು ಮತ್ತು 0.38 ರಿವಾಲ್ವರ್ ಹಾಗು ಗುಂಡುಗಳನ್ನು ರವಿ ಪೂಜಾರಿ ಪೂರೈಸಿದ್ದ ಎಂದು ಆರೋಪಿಸಲಾಗಿತ್ತು.
ಈ ಹಿಂದೆ ವಿಚಾರಣೆ ವೇಳೆ ಮುತ್ತಪ್ಪ ರೈ ಹಾಗೂ ಇತರ ನಾಲ್ವರನ್ನು ಸಾಕ್ಷ್ಯಾಧಾರ ಕೊರತೆಯಿಂದ ಕೋರ್ಟ್ ಖುಲಾಸೆಗೊಳಿಸಿತ್ತು. ಈ ಪ್ರಕರಣದಲ್ಲಿ ಶೂಟರ್ ಯೂಸುಫ್ ಬಚಕಾನಗೆ ಮಾತ್ರ ಶಿಕ್ಷೆಯಾಗಿದ್ದು, ಆತ ಜೀವಾವಧಿ ಶಿಕ್ಷೆಗೊಳಗಾಗಿ ಈಗ ಬಳ್ಳಾರಿ ಜೈಲಿನಲ್ಲಿದ್ದಾನೆ.
A special court in Bengaluru has acquitted international gangster Ravi Pujari in the 2001 shootout and murder of a city-based builder. The Special Court judge in the judgement delivered on August 18 said, "There is no evidence before this court to prove beyond reasonable doubt that prior to January 5, 2001, Ravi Pujari conspired with the other accused to kill the builder.”
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm