ಕೊಡಗು ಜಿಲ್ಲೆಯನ್ನು ಬಿಜೆಪಿ- ಕಾಂಗ್ರೆಸ್ ಸೇರಿಕೊಂಡು ಜಮ್ಮು- ಕಾಶ್ಮೀರ ಮಾಡುತ್ತಿವೆ ; ಎಚ್​ಡಿಕೆ ಗರಂ ! 

24-08-22 01:43 pm       Bangalore Correspondent   ಕರ್ನಾಟಕ

ಕೊಡಗಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಅಲ್ಲಿನ ಜನರ ಬದುಕಿನ‌ ಜತೆ ಚೆಲ್ಲಾಟ ಆಡುತ್ತಿದ್ದು, ಪ್ರಕೃತಿ ಸೌಂದರ್ಯದ ಕರ್ನಾಟಕದ ಕಾಶ್ಮೀರವನ್ನು ಜಮ್ಮು ಮತ್ತು ಕಾಶ್ಮೀರವನ್ನಾಗಿ ಮಾಡಲು ಹೊರಟಿವೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು, ಆ 23 : ಕೊಡಗಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಅಲ್ಲಿನ ಜನರ ಬದುಕಿನ‌ ಜತೆ ಚೆಲ್ಲಾಟ ಆಡುತ್ತಿದ್ದು, ಪ್ರಕೃತಿ ಸೌಂದರ್ಯದ ಕರ್ನಾಟಕದ ಕಾಶ್ಮೀರವನ್ನು ಜಮ್ಮು ಮತ್ತು ಕಾಶ್ಮೀರವನ್ನಾಗಿ ಮಾಡಲು ಹೊರಟಿವೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕೊಡಗು ಜಿಲ್ಲೆಯ ಮುಖಂಡರ ಜೊತೆ ಪಕ್ಷ ಸಂಘಟನೆ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು " ಕೊಡಗಿನಲ್ಲಿ ಶಾಂತಿ ಕಾಪಾಡಲು ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ. ಜತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದಿದ್ದೇನೆ. ಸರಕಾರ ಜಾರಿ ಮಾಡಿರುವ ನಿಷೇಧಾಜ್ಞೆ ತೆರವಾದ ನಂತರ ಮಡಿಕೇರಿಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಸಮಾವೇಶ ಹಮ್ಮಿಕೊಳ್ಳಲಾಗುವುದು " ಎಂದು ತಿಳಿಸಿದರು.

Former Karnataka minister CM Ibrahim quits Congress, likely to join JD(S) |  The News Minute

ಕರಾವಳಿಯ ರೀತಿಯಲ್ಲೇ ಕೊಡಗಿನಲ್ಲಿಯೂ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಆಗುತ್ತಿದೆ. ಇದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ. ಸೌಹಾರ್ದಯುತ ನಾಡಿನ ಜನತೆಗೆ ಜಾಗೃತಿ ಮೂಡಿಸಬೇಕು. ಜನ ಶಾಂತಿಯಿಂದ ಬದುಕಲು ಕಾಪಾಡಬೇಕು. ಕೊಡಗಿನಲ್ಲಿ 144 ಸೆಕ್ಷನ್ ಮುಗಿದ ನಂತರ ನಾನು ಮತ್ತು ನಮ್ಮ ಪಕ್ಷದ ಅಧ್ಯಕ್ಷರಾದ ಸಿಎಂ ಇಬ್ರಾಹಿಂ ಸೇರಿ ಕೊಡಗಿಗೆ ಹೋಗುತ್ತೇವೆ. ಶಾಂತಿ ಸಭೆ ನಡೆಸುತ್ತಿವೆ ಎಂದರು.

ಕೊಡಗಿನಲ್ಲಿ ಇತಿಹಾಸ ಕೆದಕಿ ಕಚ್ಚಾಡುವುದು ಬೇಡ. ಹಿಂಸೆ ಯಾರಿಗೂ ಒಳ್ಳೆಯದಲ್ಲ. ದೇಶಕ್ಕೆ ಮಹಾವೀರರನ್ನು ಕೊಟ್ಟ ನೆಲದಲ್ಲಿ ಕ್ಷುಲ್ಲಕ ವಿಷಯಗಳ ವಿಜೃಂಭಣೆ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷಗಳು ರಾಜಕೀಯಕ್ಕಾಗಿ ಇಂತಹ ಒಡಕು ಮೂಡಿಸುತ್ತಿವೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

Eight killed, over 4,000 displaced after heavy rains in Karnataka's Kodagu  district | India News,The Indian Express

ಕೋಮುದಳ್ಳುರಿಗೆ ತಳ್ಳುವ ಕೆಲಸ

ಕೊಡಗು ಪ್ರತಿ ವರ್ಷ ಮಳೆ, ನೆರೆಯಿಂದ ಸಂಕಷ್ಟ ಅನುಭವಿಸುತ್ತಿದೆ. ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಹೋಂ ಸ್ಟೇಗಳು ಖಾಲಿ ಬಿದ್ದಿವೆ. ಜನರ ಬದುಕು ಕಷ್ಟದಲ್ಲಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಸರಕಾರದ ಕರ್ತವ್ಯ. ಆದರೆ, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಕೇವಲ ಕೊಡಗನ್ನು ಕೋಮುದಳ್ಳುರಿಗೆ ತಳ್ಳುವ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಕಿಡಿ ಕಾರಿದರು.

Congress storms Bellary | Deccan Herald

ಕಾಂಗ್ರೆಸ್‌ಗೆ ಅಧಿಕಾರ ಪಡೆಯುವ ಯೋಚನೆ

ಕಾಂಗ್ರೆಸ್‌ ಬಳ್ಳಾರಿ ಪಾದಯಾತ್ರೆಯಂತೆ ಇಲ್ಲಿ ಪಾದಯಾತ್ರೆ ನಡೆಸಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಯೋಚನೆಯಲ್ಲಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ದ ದಂಗೆ ಎಬ್ಬಿಸುವ ಭ್ರಮೆಯಲ್ಲಿ ಇದ್ದಾರೆ ಎಂದು ವ್ಯಂಗ್ಯವಾಡಿದ ಎಚ್‌ಡಿಕೆ, ಇದಕ್ಕೆ ಪ್ರತಿಯಾಗಿ ಬಿಜೆಪಿಯವರು ಜನಾಂದೋಲನ‌ ಎನ್ನುತ್ತಿದ್ದಾರೆ. ಸದ್ಯ 144 ಸೆಕ್ಷನ್ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ ಅಶಾಂತಿ ಮೂಡಿಸಿ, ವಾತವರಣ ಕಲುಷಿತಗೊಳಿಸುವ ಹುನ್ನಾರದ ಬಗ್ಗೆ ನಾವು ಜನ‌ಜಾಗೃತಿ ಮೂಡಿಸಲು ಹೇಳಿದ್ದೇವೆ. ಕೊಡಗಿನ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಎರಡೂ ಪಕ್ಷಗಳು ಮಾಡುತ್ತಿವೆ. ಈ ಬಗ್ಗೆ ಜನಜಾಗೃತಿ ಮೂಡಿಸಿ ಸಂಘಟನೆ ಮಾಡಲು ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ ಎಂದರು.

Congress and BJP and trying to convert Kodagu into Jammu Kashmir slams HDK.