ಜೀವಂತ ಇಲ್ಲದವರಿಗೂ ಪ್ರತಿಷ್ಠಾನ ಸದಸ್ಯ ಸ್ಥಾನ ; ಕನ್ನಡ, ಸಂಸ್ಕೃತಿ ಇಲಾಖೆ ಮಹಾ ಎಡವಟ್ಟು 

25-08-22 10:50 am       Bangalore Correspondent   ಕರ್ನಾಟಕ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ.

ಬೆಂಗಳೂರು, ಆಗಸ್ಟ್ 25 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡುವಲ್ಲಿ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನವನ್ನು ಸರ್ಕಾರ ನೀಡಿದ್ದು ನಗೆಪಾಟಲಿಗೀಡಾಗಿದೆ. 

ದಿವಂಗತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿಗೂ ಸದಸ್ಯ ಸ್ಥಾನ ನೀಡಿ ಸರ್ಕಾರ ಮಹಾ ಎಡವಟ್ಟು ಮಾಡಿದೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾಗಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಹೆಸರನ್ನು ಹೆಸರಿಸಲಾಗಿದೆ.  
ಕಳೆದ ವರ್ಷದ ಡಿಸೆಂಬರ್‌ನಲ್ಲಿ ಹೃದಯಾಘಾತದಿಂದ ರಾಜೇಶ್ವರಿ ಅವರು ನಿಧನರಾಗಿದ್ದರು. ಆದರೆ ಅವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿ‌ನಿಂದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಸದಸ್ಯರ ಹೆಸರನ್ನು ಅಂತಿಮಗೊಳಿಸುವ ವೇಳೆ ಅವರ ಸ್ಥಿತಿ ಹೇಗಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ವ್ಯವಧಾನವೂ ಇಲ್ಲವೇ ಎನ್ನುವಂತಾಗಿದೆ.

Kannada cultural department makes big blunders by making dead people as it's members.