ಬ್ರೇಕಿಂಗ್ ನ್ಯೂಸ್
25-08-22 12:22 pm HK News Desk ಕರ್ನಾಟಕ
ತುಮಕೂರು, ಆಗಸ್ಟ್ 25: ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರು ಕಡೆಗೆ ತೆರಳುತ್ತಿದ್ದ ಕ್ರೂಸರ್ ಟೆಂಪೋದಲ್ಲಿ ಸುಮಾರು 23 ಜನ ಪ್ರಯಾಣ ಮಾಡುತಿದ್ದರು ಎನ್ನಲಾಗಿದ್ದು, ಎಲ್ಲರೂ ಕೂಲಿ ಕಾರ್ಮಿಕರಾಗಿದ್ದರು. ರಾಯಚೂರು ಜಿಲ್ಲೆಯ ಮಾನ್ವಿಯಿಂದ ಬೆಂಗಳೂರು ಕಡೆ ಪ್ರಯಾಣ ಮಾಡುತಿದ್ದರು. ಮೃತಪಟ್ಟವರನ್ನು ಮಾನ್ವಿ ತಾಲೂಕಿನ ಸುಜಾತಾ (25), ಲಕ್ಷ್ಮಿ (13), ವಿನೋದ್ (3), ಕ್ರೂಸರ್ ಚಾಲಕ ಕೃಷ್ಣಪ್ಪ (25) ಎಂದು ತಿಳಿದುಬಂದಿದ್ದು, ಉಳಿದವರ ಹೆಸರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಮುಂದಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ 13 ಜನ ಗಾಯಗೊಂಡಿದ್ದಾರೆ.

ಟೆಂಪೋದಲ್ಲಿದ್ದ ಶಿವರಾಜು ಎಂಬವರು ಮಾತನಾಡಿ, 'ನಾನು ಡ್ರೈವರ್ ಪಕ್ಕ ಕೂತಿದ್ದೆ, ಟೆಂಪೋ ನಿಧಾನಕ್ಕೆ ಹೋಗಿತ್ತು, ಲಾರಿ ಡಿಕ್ಕಿ ಹೊಡೆದ ಮೇಲೆ ಟೆಂಪೊ ಪಲ್ಟಿ ಹೊಡೆದುಬಿಡ್ತು' ಎಂದಿದ್ದಾರೆ. ಇಪ್ಪತ್ತು ಜನರು ಟೆಂಪೋದಲ್ಲಿ ಇದ್ದರು. ಒಳಗಡೆ ಭರ್ತಿ ಆಗಿದ್ದರಿಂದ ಮತ್ತೆ ಇನ್ನಿಬ್ಬರು ಟೆಂಪೊ ಮೇಲೆ ಮಲಗಿದ್ದರು. ಟೆಂಪೊ ಮೇಲೆ ಮಲಗಿದ್ದವರಲ್ಲಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿದ್ದು, 'ಇದೊಂದು ಅತ್ಯಂತ ದುರಾದೃಷ್ಟಕರ ಘಟನೆ' ಎಂದಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಮಾತನಾಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ನಿರ್ದೇಶನ ನೀಡಲಾಗಿದೆ. ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.


ಪರಿಹಾರ ಒದಗಿಸಬೇಕು ಎಂದ ಕುಮಾರಸ್ವಾಮಿ
ಅಪಘಾತದಲ್ಲಿ 9 ಜನರು ದುರ್ಮರಣಕ್ಕಾಗಿ, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಮೃತಪಟ್ಟವರು ಕೂಲಿಕಾರ್ಮಿಕರು, ಬದಕು ಕಟ್ಟಿಕೊಳ್ಳಲು ಅವರೆಲ್ಲರೂ ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದರೆಂದು ತಿಳಿದು ನನಗೆ ಅತೀವ ದುಃಖವಾಗಿದೆ. ತಕ್ಷಣವೇ ಸ್ವತಃ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ' ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ತಕ್ಷಣವೇ ಸ್ವತಃ ಮುಖ್ಯಮಂತ್ರಿ ಶ್ರೀ @BSBommai ಅವರೇ ಖುದ್ದು ಕ್ರಮ ವಹಿಸಿ ಜೀವ ಕಳೆದುಕೊಂಡಿರುವವರ ಎಲ್ಲ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಗಾಯಾಳುಗಳಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸುತ್ತೇನೆ.
— H D Kumaraswamy (@hd_kumaraswamy) August 25, 2022
ಗಾಯಾಳುಗಳೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. 2/2
At least nine people, including three children, died after a tempo collided with a truck on the National Highway near Sira in Karnataka’s Tumakuru district on Thursday. Around a dozen people were also reportedly injured in the incident and were shifted to hospital for treatment.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm