ತುಮಕೂರು ಭೀಕರ ಅಪಘಾತಕ್ಕೆ ಮೋದಿ ಸಂತಾಪ ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ 

25-08-22 01:39 pm       HK News Desk   ಕರ್ನಾಟಕ

ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ

ತುಮಕೂರು, ಆ 25: ತುಮಕೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಿಸಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರಿನ ದಿನಗೂಲಿ ಕಾರ್ಮಿಕರಾಗಿದ್ದು, ಬೆಂಗಳೂರು ಕಡೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್‌ನಲ್ಲಿ 20 ಮಂದಿ ಇದ್ದರೆಂದು ತಿಳಿದು ಬಂದಿದೆ. ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿದೆ ಎಂದು ಘಟನೆಯಲ್ಲಿ ಬದುಕುಳಿದವರು ತಿಳಿಸಿದ್ದಾರೆ.

Expressing deep grief over the loss of lives in the major accident that took place in Karnataka's Tumakuru on Thursday, Prime Minister Narendra Modi extended his heartfelt condolences to the bereaved families. The PM called the incident a "heart-rending" while praying for the speedy recovery of the injured. He announced that Rs 2 lakh from Prime Minister's National Relief Fund (PMNRF) would be paid to the next of kin of each deceased and the injured would be paid Rs 50,000.