ಬ್ರೇಕಿಂಗ್ ನ್ಯೂಸ್
26-08-22 08:26 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26 : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧಾರ್ಮಿಕ ಆಚರಣೆಗಳಿಗೆ ಸರಕಾರ ಅನುಮತಿ ನೀಡಬಹುದು ಎಂದು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು ಹಿಂದುಪರ ಸಂಘಟನೆಗಳು ಖುಷ್ ಆಗಿವೆ. ಹೈಕೋರ್ಟ್ ಜಟಾಪಟಿಯ ಬಳಿಕ ರಾಜ್ಯ ಸರಕಾರದಿಂದ ಅನುಮತಿ ಗಿಟ್ಟಿಸಿಕೊಳ್ಳುವ ತರಾತುರಿಯಲ್ಲಿ ಹಿಂದು ಸಂಘಟನೆಗಳಿವೆ.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಕೋರಿ ಜಟಾಪಟಿ ನಡೆದಿರುವ ಬೆನ್ನಲ್ಲೇ, ಇದನ್ನು ಆಟದ ಮೈದಾನವಾಗಿಯಷ್ಟೇ ಬಳಸಿಕೊಳ್ಳಬೇಕು ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಗುರುವಾರ ಸ್ಪಷ್ಟಪಡಿಸಿತ್ತು. ಇದರಿಂದ ಗಣೇಶೋತ್ಸವ ಮಾಡಲು ಹೊರಟಿದ್ದವರು ಸ್ವಲ್ಪ ಮಟ್ಟಿಗೆ ಹಿನ್ನಡೆ ಅನುಭವಿಸಿದ್ದರು.
ರಂಜಾನ್ ಹಾಗೂ ಬಕ್ರೀದ್ ಹಬ್ಬಗಳ ಸಂದರ್ಭದಲ್ಲಿ ಮಾತ್ರ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಉಳಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಈ ಕುರಿತ ಅರ್ಜಿ ವಿಲೇವಾರಿಯಾದ ನಂತರ ಮೈದಾನ ಅಭಿವೃದ್ಧಿಪಡಿಸಬಹುದು ಎಂದು ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಹೋಗಿದ್ದರು. ಇದೀಗ ಧಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡುವ ಅಧಿಕಾರವನ್ನು ಸರ್ಕಾರಕ್ಕೆ ಹೈಕೋರ್ಟ್ ನೀಡಿ ಆದೇಶ ಮಾಡಿದೆ.
ಆ.31 ರಿಂದ ನಿರ್ದಿಷ್ಟ ಅವಧಿಗೆ ಅನುಮತಿ ಕೊಡಬಹುದು ಎಂದು ಹೈಕೋರ್ಟ್ ಸೂಚಿಸಿದ್ದು ಹಿಂದು ಸಂಘಟನೆಗಳು ನಿರಾಳ ಆದಂತಾಗಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ಸಿಗುವ ಸಾಧ್ಯತೆಯಿದೆ.
ಚಾಮರಾಜಪೇಟೆ ಮೈದಾನದಲ್ಲಿ 11 ದಿನಗಳ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಏಳು ವಿವಿಧ ಸಂಘ ಸಂಸ್ಥೆಗಳಿಂದ ಸರಕಾರಕ್ಕೆ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಂತೆ ಒತ್ತಾಯಿಸಿ ಎರಡು ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಪರ-ವಿರೋಧದ ಅರ್ಜಿಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತ್ತು. ಜಟಾಪಟಿ ಏರ್ಪಟ್ಟ ಹಿನ್ನೆಲೆಯಲ್ಲಿ, ಆಟದ ಮೈದಾನವನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಗುರುವಾರ ಮಧ್ಯಂತರ ಆದೇಶ ನೀಡಿತ್ತು.
ಏಕಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ತಿದ್ದುಪಡಿ ಮಾಡಿದ ಹಂಗಾಮಿ ಮುಖ್ಯನ್ಯಾಯ ಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ಪೀಠ, ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹಸಿರು ನಿಶಾನೆ ತೋರಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಆ.31 ರಿಂದ ನಿರ್ದಿಷ್ಟ ಅವಧಿಗೆ ಧಾರ್ಮಿಕ- ಸಾಂಸ್ಕೃತಿಕ ಆಚರಣೆಗೆ ಸರ್ಕಾರ ಅನುಮತಿ ನೀಡಬಹುದು ಎಂದು ಹೇಳಿದೆ.
The Karnataka High Court on Friday granted permission to hold Ganesh Chaturthi celebrations at Idgah Maidan in Bengaluru's Chamarajpet after the government filed an appeal against the August 25 interim order to maintain status quo.The high court said that the government could take a call to permit Ganesha Chaturthi on the ground which has been caught up in a row."Indian society comprises religious, linguistic, regional or sectional diversities. The Constitution itself fosters brotherhood amongst various sections of society. The principle of religious toleration is a characteristic of Indian civilization.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm