ಜಿ ಕೆಟಗರಿ ಸೈಟ್ ಹಂಚಿಕೆಯಲ್ಲಿ ಹಗರಣ ; ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು 

26-08-22 10:42 pm       Bangalore Correspondent   ಕರ್ನಾಟಕ

ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ ಕೆಟಗರಿ ಸೈಟು ಹಂಚಿಕೆಯನ್ನು ಸಂಪೂರ್ಣ ನಿಷೇಧಿಸಿದ್ದರೂ ಬದಲಿ ನಿವೇಶನ ಹಂಚಿಕೆ ಎಂಬ ವಾಮಮಾರ್ಗವನ್ನು ಹುಡುಕಿಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ರೂ. ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡಿರುವ ಸರಕಾರದ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. 

ಬೆಂಗಳೂರು, ಆ.26 : ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ ಕೆಟಗರಿ ಸೈಟು ಹಂಚಿಕೆಯನ್ನು ಸಂಪೂರ್ಣ ನಿಷೇಧಿಸಿದ್ದರೂ ಬದಲಿ ನಿವೇಶನ ಹಂಚಿಕೆ ಎಂಬ ವಾಮಮಾರ್ಗವನ್ನು ಹುಡುಕಿಕೊಂಡು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ರೂ. ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡಿರುವ ಸರಕಾರದ ನೀತಿಯನ್ನು ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿದೆ. 

ಶುಕ್ರವಾರ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ತಕ್ಷಣದಿಂದಲೇ ಬಿಡಿಎ ಆಯುಕ್ತರನ್ನು ವರ್ಗಾವಣೆಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಮೌಖಿಕ ಆದೇಶ ನೀಡಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ಆಮ್ ಆದ್ಮಿ ಪಕ್ಷದ ವತಿಯಿಂದ ದೂರನ್ನು ದಾಖಲಿಸಲಾಗಿದೆ ಎಂದು ಹೇಳಿದರು.

AAP plans to target Congress with 'outsider' barb | Chandigarh News - Times  of India

ಕಳೆದ 4 ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರೂ ಅವರಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ಬಿಜೆಪಿ ಸರಕಾರ ವಿಫಲವಾಗಿದೆ. ಈಗ ತನ್ನ ಮಂತ್ರಿ ಹಾಗೂ ಪ್ರಭಾವಿಗಳಿಗೆ ಕೋಟ್ಯಂತರ ರೂಪಾಯಿಗಳ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡುವ ಪರಿ 40 ಪರ್ಸೆಂಟ್ ಕಮಿಷನ್‍ ದಂಧೆಯ ಮತ್ತೊಂದು ರೂಪವಾಗಿದೆ ಎಂದವರು ಕಿಡಿಕಾರಿದರು.

Supreme Court: Latest news, Updates, Photos, Videos and more.

ಸುಪ್ರೀಂಕೋರ್ಟ್ 2021ರ ಅ.29ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ರೂ. ಬೆಲೆಬಾಳುವ ಆರ್‍ಎಂವಿ ಬಡಾವಣೆಯಂತಹ ಪ್ರತಿಷ್ಠಿತ ಜಾಗದಲ್ಲಿ ಮಂತ್ರಿ ಮಹೋದಯರಿಗೆ ಸೈಟು ಹಂಚಿಕೆಯ ಅವ್ಯವಹಾರಗಳಲ್ಲಿ ಮುಳುಗಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ ನ್ಯಾಯಾಲಯಗಳ ಆದೇಶಗಳಿಗೂ ಕಿಂಚಿತ್ತು ಕಿಮ್ಮತ್ತನ್ನೂ ಬಿಜೆಪಿ ಸರಕಾರ ನೀಡುತ್ತಿಲ್ಲ. ‘ಉಂಡೂ ಹೋದ ಕೊಂಡೂ ಹೋದ’ ಎಂಬಂತೆ ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಗೆಡವಿದ ಗೃಹಸಚಿವ ಆರಗ ಜ್ಞಾನೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ ಎಂದು ಮೋಹನ್ ದಾಸರಿ ಹೇಳಿದರು.

ಕೂಡಲೇ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ವಜಾಗೊಳಿಸಬೇಕು ಅಥವಾ ಮರ್ಯಾದೆಯಿಂದ ತಾವೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಆಮ್ ಆದ್ಮಿ ಪಕ್ಷದ ರಾಜ್ಯ ವಕ್ತಾರ ಕೆ.ಮಥಾಯಿ, ಆಮ್ ಆದ್ಮಿ ಪಕ್ಷವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರ ಹೋರಾಟಕ್ಕೆ ಇಳಿಯಲಿದೆ ಎಂದು ಸರಕಾರವನ್ನು ಎಚ್ಚರಿಸಿದರು.

A day after the Supreme Court made observations on the illegal allotments of Bangalore Development Authority (BDA) sites to multiple people, an Aam Aadmi Party (AAP) leader in Bengaluru filed a complaint of dereliction of duty against Karnataka Home Minister Araga Jnanendra and BDA Commissioner Rajesh Gowda Friday.