ಬ್ರೇಕಿಂಗ್ ನ್ಯೂಸ್
29-08-22 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ತರಗತಿ ಒಳಗಡೆ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ಕಡೆಗೂ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ಪ್ರಕರಣದಲ್ಲಿ ಹಿಜಾಬ್ ನಿಷೇಧ ಆದೇಶ ಮಾಡಿರುವ ಕರ್ನಾಟಕ ಸರಕಾರವನ್ನು ಪಾರ್ಟಿ ಮಾಡಲು ಕೋರಲಾಗಿತ್ತು. ಇದರಂತೆ, ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ನಡೆಸುವುದಕ್ಕೂ ಮುನ್ನ ಕರ್ನಾಟಕ ಸರಕಾರಕ್ಕೆ ನೋಟಿಸ್ ಮಾಡಿದೆ. ಅಲ್ಲದೆ, ಸೆಪ್ಟೆಂಬರ್ 5ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿದೆ.
ಕಳೆದ ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ಹಿಜಾಬ್ ಪ್ರಕರಣ, ಕ್ರಮೇಣ ರಾಜ್ಯಾದ್ಯಂತ ವ್ಯಾಪಿಸಿ ತೀವ್ರ ಸದ್ದು ಮಾಡಿತ್ತು. ಸರಕಾರಿ ಪದವಿಪೂರ್ವ ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿದ ಶಿಕ್ಷಣ ಇಲಾಖೆಯ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಭಾರೀ ಜಟಾಪಟಿಯ ಬಳಿಕ ಮಾರ್ಚ್ 15ರಂದು ರಾಜ್ಯ ಸರಕಾರದ ಕ್ರಮವನ್ನು ಸರಿಯೆಂದು ತೀರ್ಪು ನೀಡಿತ್ತು.
ಆದರೆ ಮುಸ್ಲಿಂ ಸಂಘಟನೆಗಳು ಹೈಕೋರ್ಟ್ ಆದೇಶವನ್ನು ಆಕ್ಷೇಪಿಸಿದ್ದವು. ಬಳಿಕ ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿತ್ತು. ಅರ್ಜಿಗಳನ್ನು ತುರ್ತಾಗಿ ಪರಿಗಣಿಸಬೇಕೆಂದು ಮನವಿ ಮಾಡಲಾಗಿತ್ತು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಮಧ್ಯಂತರ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಸೋಮವಾರ ಮುಖ್ಯ ನ್ಯಾಯಾಧೀಶ ಯುಯು ಲಲಿತ್, ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿಯನ್ನು ಒಂದಾಗಿಸಿ ವಿಚಾರಣೆ ಕೈಗೆತ್ತಿಕೊಂಡಿದೆ. ಇದೇ ವೇಳೆ, ಹಿಜಾಬ್ ಪರ ವಕೀಲರು ಅರ್ಜಿ ವಿಚಾರಣೆ ಮುಂದಕ್ಕೆ ಹಾಕುವಂತೆ ಮನವಿ ಮಾಡಿದ್ದಕ್ಕೆ ಗರಂ ಆಗಿರುವ ನ್ಯಾಯಪೀಠ ಈ ಹಿಂದೆ ನೀವೇ ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಹೇಳಿದ್ರಿ. ಈಗ ಮುಂದಕ್ಕೆ ಹಾಕಬೇಕೆಂದರೆ ಹೇಗೆ ? ಅದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
The Supreme Court fixed the hearing of arguments on Monday in a batch of petitions challenging a Karnataka High Court decision upholding a State Government Order banning the wearing of hijab to classrooms while criticising the petitioner-students of "forum-shopping" for seeking an adjournment.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm