ಬ್ರೇಕಿಂಗ್ ನ್ಯೂಸ್
29-08-22 10:57 pm Bangalore Correspondent ಕರ್ನಾಟಕ
ಬೆಂಗಳೂರು, ಆ 29: ಕರ್ನಾಟಕದಾದ್ಯಂತ ಭಾರಿ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಸಮುದ್ರದಲ್ಲಿ, ಆಂಧ್ರಪ್ರದೇಶ ಮತ್ತು ಕೇರಳ ಭಾಗದಲ್ಲಿ ಉಂಟಾಗಿರುವ ತೀವ್ರ ಸುಳಿಗಾಳಿಯಿಂದಾಗಿಮುಂಗಾರು ಮಾರುತಗಳು ಚುರುಕುಗೊಂಡಿವೆ.ಇದರ ಪ್ರಭಾವದಿಂದ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು, ಸೆ.2ರವರೆಗೂ ಮುಂದುವರಿಯುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಮಾತ್ರ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಅಬ್ಬರಿಸಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರಗಳ ಒಂದೆರಡು ಕಡೆ ಭಾರಿ ಮಳೆ ಹಿನ್ನೆಲೆ ಎರಡು ದಿನ 'ಯೆಲ್ಲೋ ಅಲರ್ಟ್' ಕೊಡಲಾಗಿದೆ.
ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಅಬ್ಬರ ಮಳೆ ಬೀಳಲಿದೆ. ಈ ಪೈಕಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಧಾರಾಕಾರ ಮಳೆ ಬೀಳಲಿದೆ.
12ಸೆಂ.ಮೀ. ವರೆಗೆ ಮಳೆ ನಿರೀಕ್ಷೆ ;
ನಂತರ ಮೂರು ದಿನ ಈ ಪೈಕಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣದಿಂದ ಭಾರಿ ಮಳೆ ಬೀಳಲಿದ್ದು, ಈ ಎಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಸುಮಾರು 12ಸೆಂ. ಮೀ.ನಷ್ಟು ಮಳೆ ದಾಖಲಾಗಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.
ಸೋಮವಾರ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಉತ್ತರ ಒಳನಾಡು ಜಿಲ್ಲೆಗಳ ಹಾವೇರಿ, ಬೆಳಗಾವಿ, ಬಾಗಲಕೋಟೆ, ರಾಣೆಬೆನ್ನೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಬಿದ್ದಿದೆ.
Heavy rains expected in karnataka for other 4 days yellow alert declared.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am