ಕಾಂಗ್ರೆಸಿಗೆ ಮತ್ತೊಂದು ಶಾಕ್ ; ಮಾಜಿ ಸಂಸದ ಮುದ್ದಹನುಮೇಗೌಡ ಗೌಡ ಪಕ್ಷಕ್ಕೆ ರಾಜಿನಾಮೆ, ಕುಣಿಗಲ್ ಕ್ಷೇತ್ರದಲ್ಲಿ ಸ್ಪರ್ಧೆ 

01-09-22 08:37 pm       Bangalore Correspondent   ಕರ್ನಾಟಕ

ಪಕ್ಷದ ಬಗ್ಗೆ ಅಸಮಾಧಾನ ಹೊಂದಿದ್ದ ತುಮಕೂರಿನ ಮಾಜಿ ಸಂಸದ ಮುದ್ದಹನುಮೇಗೌಡ ಕಡೆಗೂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ರಾಜೀನಾಮೆ ಪತ್ರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ರವಾನಿಸಿದ್ದಾರೆ.

ಬೆಂಗಳೂರು, ಸೆ.1: ಪಕ್ಷದ ಬಗ್ಗೆ ಅಸಮಾಧಾನ ಹೊಂದಿದ್ದ ತುಮಕೂರಿನ ಮಾಜಿ ಸಂಸದ ಮುದ್ದಹನುಮೇಗೌಡ ಕಡೆಗೂ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ರಾಜೀನಾಮೆ ಪತ್ರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ರವಾನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. 

ಈ ಕುರಿತು ಸುದ್ದಿಗಾರರಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ ಬಿಡಬೇಕಾದರೆ ನನ್ನ ಕಾರಣವಾಗಿರಬೇಕು, ಇಲ್ಲವೇ ಪಕ್ಷದಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆಗಿದ್ದರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು. ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣದಿಂದ ಇರಬೇಕು ತಾನೇ ಎಂದು ಪ್ರಶ್ನಿಸಿದರು. 

1989ರಲ್ಲಿ ಕಾಂಗ್ರೆಸ್ ಬಿ ಪಾರಂ ಕೊಟ್ಟು ನಂತರ ಬೇರೆಯವರಿಗೆ ಟಿಕೆಟ್ ಕೊಟ್ಟಿದ್ದರು. ಆನಂತರ 2019ರಲ್ಲಿ ಹಾಲಿ ಸಂಸದನಾಗಿದ್ರೂ ಸ್ಪರ್ಧಿಸಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ. ನಾನು ಅತ್ಯಂತ ಕ್ರಿಯಾಶೀಲನಾಗಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷಕ್ಕೆ ನನ್ನದೇ ಆದ ಅಳಿಲು ಸೇವೆ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನನ್ನ ಸೇವೆಯೂ ಇದೆ. ನನ್ನ ಕ್ರಿಯಾಶೀಲ ರಾಜಕೀಯ ನಿಂತಿಲ್ಲ. ಪಕ್ಷಕ್ಕೆ ಮಾತ್ರ ನನ್ನ ರಾಜೀನಾಮೆ ಪತ್ರ ಸಲ್ಲಿಸುತ್ತಿದ್ದೇನೆ ಎಂದರು.

BJP attacks Siddaramaiah for 'visiting temple after eating meat' |  Bengaluru - Hindustan Times

ಸಿದ್ದರಾಮಯ್ಯ ಪಕ್ಷ ತೊರೆಯುವ ನಿರ್ಧಾರ ಮಾಡಬೇಡಿ ಅಂತಾ ಹೇಳಿದ್ದಾರೆ. ಆದರೆ, ಪಕ್ಷದಿಂದ ಬಿಡುಗಡೆ ಮಾಡಿ ಎಂದು ನಾನೇ ಕೇಳಿದ್ದೇನೆ. ಇಷ್ಟು ವರ್ಷ ನಡೆದ ರಾಜಕೀಯ ಧೋರಣೆಗಳು ಪಕ್ಷದ ಈಗಿನ ಪರಿಸ್ಥಿತಿಗೆ ಕಾರಣವಾಗಿದೆ. ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ. ಮುಂದೆ ಒಳ್ಳೆಯ ಅವಕಾಶಗಳು ಬರಲಿದೆ ಎಂದು ಹೇಳಿದರು. 

ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ: ಸುರ್ಜೆವಾಲಾ – Public TV

ಹಲವು ವರ್ಷಗಳ ಹಿಂದೆಯೇ ನಾನು ಕುಣಿಗಲ್ ಕ್ಷೇತ್ರದ ಶಾಸಕನಾಗಿದ್ದೆ. ಮುಂದಿನ ಚುನಾವಣೆಗೆ ಅಲ್ಲಿಯೇ ಸ್ಪರ್ಧಿಸಬೇಕೆಂದು ಜನ ಬಯಸಿದ್ದಾರೆ. ಅತೀ ಶೀಘ್ರದಲ್ಲೇ ಒಳ್ಳೆಯ ನಿರ್ಧಾರಕ್ಕೆ ಬರುತ್ತೇನೆ ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಕೇಳಿದ ಪ್ರಶ್ನೆಗೆ, ನಾನೇನು ಅಧಿಕಾರದಲ್ಲಿದ್ದೇನಾ ಆಪರೇಷನ್ ಮಾಡೋದಕ್ಕೆ ಎಂದು ಕೇಳಿದರು. ರಣದೀಪ್ ಸಿಂಗ್ ಸುರ್ಜೇವಾಲ ಪಕ್ಷದಲ್ಲೇ ಇರುವಂತೆ ಹೇಳಿದ್ದರು. ರಾಜ್ಯಸಭಾ ಚುನಾವಣೆ ವೇಳೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಬಳಿಕ ಏನನ್ನೂ ಮಾತನ್ನಾಡಿಲ್ಲ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನ್ನಾಡಲು ಬಯಸುವುದಿಲ್ಲ. ಇವತ್ತೇ ರಾಜೀನಾಮೆ ಪತ್ರವನ್ನು ಕಳುಹಿಸುತ್ತೇನೆ. ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡಲು ಈ ರೀತಿ ಮಾಡುತ್ತಿಲ್ಲ. ಮುಂದೆ ಕುಣಿಗಲ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ನನ್ನ ನಿರ್ಧಾರ ಅಚಲವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

Congress former Mp Mudhahanuman gowda resigs from congress.