ಬ್ರೇಕಿಂಗ್ ನ್ಯೂಸ್
02-09-22 10:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಕೆಲವೇ ತಿಂಗಳಲ್ಲಿ ಎದುರಾಗುವ ರಾಜ್ಯ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ಬಿಜೆಪಿ ಹೈಕಮಾಂಡ್ ರಂಗಪ್ರವೇಶ ಮಾಡಿದ್ದು, ತಿಂಗಳಿಗೊಮ್ಮೆ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಬೇಕೆಂಬ ರಾಜ್ಯ ಘಟಕದ ಬೇಡಿಕೆಯನ್ನು ಪುರಸ್ಕರಿಸಿದೆ. ಅದರ ಭಾಗವಾಗಿ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ರಾಜ್ಯ ಬಿಜೆಪಿ ಮುಂದಾಗಿದ್ದು ಕೇಂದ್ರದ ನಾಯಕರನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸಜ್ಜಾಗುತ್ತಿದೆ. ಅದಕ್ಕಾಗಿಯೇ ಕೇಂದ್ರದ ನಾಯಕರನ್ನು ಕರೆತಂದು ಸಮಾವೇಶಗಳನ್ನು ಮಾಡುವ ಪ್ರಯತ್ನ ಆರಂಭಿಸಿದ್ದು, ಇದಕ್ಕೆ ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದ್ದಾರೆ. ಕಳೆದ ಜೂನ್ 20ರಂದು ಬೆಂಗಳೂರಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಉಪನಗರ ರೈಲ್ವೇ ಯೋಜನೆ ಸೇರಿ ಹಲವು ಕಾರ್ಯಕ್ರಮಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ್ದರು. ಅದರ ಬೆನ್ನಲ್ಲೇ ಆಗಸ್ಟ್ 4 ರಂದು ಅಮಿತ್ ಶಾ ಬೆಂಗಳೂರಿಗೆ ಬಂದಿದ್ದರು. ಚಿತ್ರದುರ್ಗದಲ್ಲಿ ಸಹಕಾರಿ ಸಮಾವೇಶದಲ್ಲಿ ಭಾಗಿಯಾಗಿದ್ದರು.
ಇದೆಲ್ಲಾ ಚುನಾವಣಾ ಸಿದ್ದತೆಯ ನಿಮಿತ್ತ ನಡೆದ ಕಾರ್ಯಕ್ರಮಗಳು ಎನ್ನುವುದರಲ್ಲಿ ಎರಡು ಮಾತಿಲ್ಲ, ಈಗ ಅದರ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೋದಿ ರಾಜ್ಯಕ್ಕೆ ಬರುತ್ತಿರುವುದು ಇದು ಎರಡನೇ ಬಾರಿ.
ಇನ್ನು ಮೋದಿ ಭೇಟಿಯ ವಾರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಸಮಾರಂಭ ನಡೆಯಲಿದ್ದು, ಜೆಪಿ ನಡ್ಡಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರದ ಸಾಧನೆಯನ್ನು ಹಾಡಿ ಹೊಗಳಲಿದ್ದು, ಮತ್ತೊಮ್ಮೆ ಬಿಜೆಪಿ ಸರ್ಕಾರ ತರುವಂತೆ ಕಾರ್ಯಕರ್ತರಿಗೆ ಕರೆ ನೀಡಲಿದ್ದಾರೆ.
ಒಂದೂವರೆ ತಿಂಗಳ ಹಿಂದೆ ಜೂನ್ 18 ರಂದು ನಡ್ಡಾ ರಾಜ್ಯಕ್ಕೆ ಭೇಟಿ ನೀಡಿದ್ದರು. ಚಿತ್ರದುರ್ಗದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ್ದರು. ಜೊತೆಗೆ ಮುರುಘಾ ಮಠಕ್ಕೂ ಭೇಟಿ ನೀಡಿದ್ದರು. ಕಳೆದ ಮೂರು ತಿಂಗಳಿನಿಂದ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ರಾಜ್ಯ ಘಟಕಕ್ಕೆ ಟಾನಿಕ್ ನೀಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿಗೆ ಹೊಸ ಹುಮ್ಮಸ್ಸು ತರುತ್ತಿರೋದು ಸುಳ್ಳಲ್ಲ.
With assembly elections in Karnataka due in less than nine months, Prime Minister Narendra Modi on Friday responded positively to a request from State BJP leaders that he should visit the state as frequently as he could to lift the party's prospects in the elections, according to party sources.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm