ಬ್ರೇಕಿಂಗ್ ನ್ಯೂಸ್
04-09-22 02:45 pm HK News Desk ಕರ್ನಾಟಕ
ತುಮಕೂರು, ಸೆ.4: ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಇದೇ ವಾರದಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಗೌಡರು ಪಟ್ಟು ಹಿಡಿದಿದ್ದರು. ಇದು ಕೈಗೂಡುವ ಲಕ್ಷಣಗಳು ಕಾಣದಿದ್ದಾಗ ಕಾಂಗ್ರೆಸ್ ತೊರೆದಿದ್ದು, ಈಗ ಬಿಜೆಪಿ ಕದ ತಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದ್ದು ಇತ್ತೀಚಿನ ರಾಜಕೀಯ ಬೆಳವಣಿಗೆ, ತನಗಾದ ಅಪಮಾನ ಮತ್ತಿತರ ವಿಚಾರಗಳು ಚರ್ಚೆಯಾಗಿದೆ. ಇದೇ ವೇಳೆ, ಕುಣಿಗಲ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಖಚಿತಪಡಿಸಿಯೇ, ಪಕ್ಷ ಸೇರ್ಪಡೆ ಆಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಣಿಗಲ್ ಕ್ಷೇತ್ರದಿಂದ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿರುವ ಡಿ.ಕೃಷ್ಣಕುಮಾರ್ ಮತ್ತೆ ತಾನೇ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಈಗ ಅವರ ಮನವೊಲಿಸಿ, ಗೌಡರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಒಂದು ವೇಳೆ ಕೃಷ್ಣಕುಮಾರ್ ಬಂಡಾಯವೆದ್ದರೆ ಅವರನ್ನು ಪಕ್ಷದಲ್ಲೇ ಉಳಿಸಿಕೊಂಡು ಚುನಾವಣೆ ಎದುರಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.
All signs of Muddahanumegowda joining BJP. Former Tumkur Lok Sabha member S P Muddahanumegowda announced Thursday his decision to quit the Congress, a setback to the DK Shivakumar-led party ahead of the 2023 Assembly election.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm