ಬ್ರೇಕಿಂಗ್ ನ್ಯೂಸ್
05-09-22 07:07 pm Bangalore Correspondent ಕರ್ನಾಟಕ
ಬೆಂಗಳೂರು,ಸೆ.5: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಅವರು ಆಮ್ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು.
ಬೆಂಗಳೂರಿನ ಹೊಟೇಲ್ ಪರಾಗ್‌ನಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್ ಪಾಂಡೆರವರು ಬ್ರಿಜೇಶ್ ಕಾಳಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು
ನಂತರ ಬ್ರಿಜೇಶ್ ಕಾಳಪ್ಪರವರನ್ನು ಸ್ವಾಗತಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, 'ದೇಶದಲ್ಲಿ ಉತ್ತಮ ಬದಲಾವಣೆ ತರಬೇಕೆಂಬ ಹಂಬಲವಿರುವ ನಾಯಕರಲ್ಲಿ ಬ್ರಿಜೇಶ್ ಕಾಳಪ್ಪ ಒಬ್ಬರು. ರಾಜಕೀಯ ಹಾಗೂ ಆಡಳಿತದಲ್ಲಿ ಆಮ್ ಆದ್ಮಿ ಪಾರ್ಟಿಯು ಬದಲಾವಣೆ ತಂದಿರುವುದನ್ನು ಮನಗಂಡು ಅವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಜನಪರ ಕಾಳಜಿಯಿರುವವರಿಗೆ ಹಾಗೂ ದೇಶದ ಭವಿಷ್ಯಕ್ಕಾಗಿ ದುಡಿಯುವ ಹಂಬಲ ಇರುವವರಿಗೆ ಎಎಪಿಯು ಉತ್ತಮ ವೇದಿಕೆಯಾಗಿದ್ದು, ಇದನ್ನು ಇನ್ನಷ್ಟು ನಾಯಕರು ಸದುಪಯೋಗ ಪಡಿಸಿಕೊಳ್ಳಬೇಕು' ಎಂದು ಹೇಳಿದರು.
'ಸಜ್ಜನ ನಾಯಕರನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನಂತಹ ಪಕ್ಷಗಳು ಮೂಲೆ ಗುಂಪು ಮಾಡುತ್ತಿವೆ. ಅವುಗಳಿಗೆ ಕಮಿಷನ್ ರೂಪದಲ್ಲಿ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯುವ ನಾಯಕರು ಬೇಕೇ ವಿನಃ ಪ್ರಾಮಾಣಿಕರು ಬೇಡ. ಹಣ ಬಲ ಹಾಗೂ ತೋಳು ಬಲವಿಲ್ಲದ ಒಳ್ಳೆಯ ಜನರನ್ನು ಅಧಿಕಾರದಿಂದ ದೂರವಿಡಲು ಆ ಪಕ್ಷಗಳ ನಾಯಕರು ಸದಾ ಯೋಜನೆ ರೂಪಿಸುತ್ತಿರುತ್ತಾರೆ. ಇದರಿಂದಾಗಿ ಅನೇಕ ಸಜ್ಜನ ರಾಜಕಾರಣಿಗಳು ಆಮ್ ಆದ್ಮಿ ಪಾರ್ಟಿಯತ್ತ ಮುಖ ಮಾಡುತ್ತಿದ್ದಾರೆ. ಎಎಪಿಯ ಸತ್ಯ - ನಿಷ್ಠೆಯ ರಾಜಕಾರಣ ಹಾಗೂ ಕೊಟ್ಟ ಮಾತಿಗೆ ತಪ್ಪದಿರುವ ಗುಣವು ಒಳ್ಳೆಯ ಮನಸ್ಸುಗಳನ್ನು ಆಕರ್ಷಿಸುತ್ತಿದೆ' ಎಂದು ಪೃಥ್ವಿ ರೆಡ್ಡಿ ಹೇಳಿದರು.
'ವಿದ್ಯಾರ್ಥಿಯಾಗಿದ್ದಾಗಲೇ ಸಾರ್ವಜನಿಕ ಜೀವನ ಪ್ರವೇಶಿಸಿದ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್ ನಾಯಕರಾಗಿ, ಅದರ ರಾಷ್ಟ್ರೀಯ ವಕ್ತಾರರಾಗಿ, ಸುಪ್ರೀಂ ಕೋರ್ಟ್ ವಕೀಲರಾಗಿ, ಪತ್ರಕರ್ತರಾಗಿ, ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರರಾಗಿ, ಹರಿಯಾಣ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ ಸುದೀರ್ಘ ಅನುಭವ ಹೊಂದಿದ್ದಾರೆ. ಕಾವೇರಿ, ಕೃಷ್ಣ, ಮಹದಾಯಿ ನದಿಗಳ ನೀರು ಹಂಚಿಕೆ ವಿವಾದಗಳಿಗೆ ಸಂಬಂಧಿಸಿದಂತೆ ಕರ್ನಾಟಕದ ಪರ ನ್ಯಾಯಾಲಯಗಳಲ್ಲಿ ವಕಾಲತ್ತು ವಹಿಸಿದ್ದಾರೆ. ಯಾವುದೇ ವಿಚಾರವನ್ನು ತಕ್ಷಣ ಗ್ರಹಿಸಿ, ಸೂಕ್ಷ್ಮ ವಿವೇಚನೆಯೊಂದಿಗೆ ಸತ್ಯಾಂಶವನ್ನು ಹೊರ ತೆಗೆಯುವ ವಿಶೇಷ ಗುಣವನ್ನು ಬ್ರಿಜೇಶ್ ಕಾಳಪ್ಪ ಹೊಂದಿದ್ದಾರೆ' ಎಂದು ಪೃಥ್ವಿ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.
Former Congress leader and Supreme Court advocate Brijesh Kalappa, who had quit the grand old party three months ago, joined the Aam Admi Party (AAP) in Bengaluru on Monday. Senior leaders of AAP's Karnataka unit Mohan Dasari, Dilip Pandey, Prithvi Reddy and K. Mathai welcomed Kalappa to the party, which is bracing for the Bruhat Bengaluru Mahanagara Palike elections.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm